LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Entertainment News

ಅಮಿತಾಬ ಬಚ್ಚನ್ ಗೆ ಭಾರತ ರತ್ನ ನೀಡಲು ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತಾ: ಹಿಂದಿ ನಟ ಅಮಿತಾಬ ಬಚ್ಚನ್ ಅವರಿಗೆ ಭಾರತ ರತ್ನ ಕೊಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಷಯ ಎತ್ತಿದ್ದಾರೆ.





ಕೋಲ್ಕತಾದಲ್ಲಿ ನಡೆದ 28ನೇ ಕೋಲ್ಕತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಲ್ಲಿ ಮಮತಾ ಬ್ಯಾನರ್ಜಿ ಅಭಿಮಾನಿಗಳೆಲ್ಲರ ಸಮ್ಮುಖದಲ್ಲಿ ”ಅಮಿತಾಬ ಬಚ್ಚನ್ ಅವರು ಲೆಜೆಂಡ್, ಜೀವಂತ ದಂತಕಥೆ ಎಂದು ನಾನು ಭಾವಿಸುತ್ತೇನೆ. ಅವರು ಭಾರತದ ಐಕಾನ್. ಅವರಿಗೆ ಭಾರತ ರತ್ನ ನೀಡಬೇಕು” ಎಂದರು.



“ಅಧಿಕೃತವಾಗಿ ಅಲ್ಲದಿದ್ದರೂ ಬಂಗಾಳ, ಅಮಿತಾಬಜಿ ಪರ ಭಾರತ ರತ್ನಕ್ಕಾಗಿ ಧ್ವನಿ ಎತ್ತುತ್ತೇವೆ. ಅವರಿಗೆ ಭಾರತ ರತ್ನ ನೀಡಬೇಕು. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗೆ ಸಾಟಿಯಿಲ್ಲ. ಅವರಿಗೆ ಧನ್ಯವಾದಗಳು ಎಂದಿದ್ದಾರೆ.



ಸಮಾರಂಭದಲ್ಲಿ ಅಮಿತಾಬ ಅವರು “ಪಠಾಣ್‌’ ಸಿನಿಮಾದ “ಬೇಷರಮ್‌ ರಂಗ್‌’ ಹಾಡಿನ ದೃಶ್ಯಗಳ ಕುರಿತು ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿ, ”ಸಿನಿಮಾ ಸೆನ್ಸರ್‌ಶಿಪ್‌ಗಾಗಿ 1952ರಲ್ಲಿ ಸಿನಿಮಾಟೋಗ್ರಾಫ‌ರ್‌ ಕಾಯಿದೆ ರಚಿಸಲಾಯಿತು. ಫಿಲ್ಮ ಸರ್ಟಿಫಿಕಲೇಶನ್‌ ಬೋರ್ಡ‌ ಸಿನಿಮಾ ಸೆನ್ಸಾರ್‌ ಕಾರ್ಯ ನಿರ್ವಹಿಸುತ್ತಿದೆ. ನಾಗರಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಈಗಲೂ ಪ್ರಶ್ನೆಗಳು ಏಳುತ್ತವೆ” ಎಂದು ಹೇಳಿದರು.



ಇದೇ ವೇಳೆ ಮಾತನಾಡಿದ ನಟ ಶಾರೂಕ‌ ಖಾನ್‌, “ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕತೆ ಹರಡುವುದು ಸಿನಿಮಾಗಳ ಮೇಲೆ ಪರಿಣಾಮ ಬೀರುತ್ತದೆ. ಸಂಕುಚಿತ ಮನೋಭಾವದಿಂದ ವಿಚಾರಗಳನ್ನು ನೋಡಲಾಗುತ್ತಿದೆ. ಜಗತ್ತು ಏನಾದರೂ ಆಗಲಿ, ಆದರೆ ಈಗಲೂ ಸಕಾರಾತ್ಮಕ ವ್ಯಕ್ತಿಗಳು ಜೀವಂತವಾಗಿದ್ದಾರೆ.’ ಎಂದು ಹೇಳಿದ್ದರು.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ