ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುರುಘಾ ಶ್ರೀಗಳ ಪುರುಷತ್ವ ಪರೀಕ್ಷೆ ವರದಿ ಬಹಿರಂಗ 

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ‌ ಆರೋಪದಡಿ ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ಮಾಡಿದ್ದು, ಇದೀಗ ವೈದ್ಯರ ವರದಿ ಬಹಿರಂಗವಾಗಿದೆ.

ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ನಿನ್ನೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯರು ಶ್ರೀಗಳ ಪುರುಷತ್ವ ವೈದ್ಯಕೀಯ ಪರೀಕ್ಷೆ ನಡೆಸಿದರು.

ಪುರುಷತ್ವ ಪರೀಕ್ಷೆ ವರದಿಯನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ಬಳಿಕ ಪುರುಷತ್ವ ಪರೀಕ್ಷೆ ವರದಿಯಲ್ಲಿ ಮಗು ಜನ್ಮ ನೀಡಲು ಅರ್ಹತೆ ಹೊಂದಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ನಿನ್ನೆ ಮುರುಘಾ ಶ್ರೀಗಳ ರಕ್ತ, ಕೂದಲು ಮತ್ತು ಉಗುರು ಮಾದರಿಗಳನ್ನು ಸಂಗ್ರಹಿಸಿ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.