LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಪ್ರತಿಸಲದಂತೆ ರಾಜ್ಯೋತ್ಸವದಂದು 'ಕಪ್ಪು ದಿನ' ಆಚರಿಸಲು ಎಂಇಎಸ್ ನಿರ್ಧಾರ

ಬೆಳಗಾವಿ, 12: ಕರ್ನಾಟಕ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯು 'ಕಪ್ಪುದಿನ' ಆಚರಿಸಲು ಎಂದಿನಂತೆ ಮತ್ತೆ ನಿರ್ಧರಿಸಿದ್ದು, ಆ ದಿನದ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರದ ಸುಮಾರು ಒಂದು ಡಜನ್ ರಾಜಕಾರಣಿಗಳನ್ನು ಮತ್ತು ತನ್ನ ಪರ ಇರುವ ನಾಯಕರನ್ನು ಆಮಂತ್ರಿಸಲಿದೆ.



ರಾಜ್ಯೋತ್ಸವ ದಿನದಂದು ಶಹಾಪುರನಲ್ಲಿರುವ ಶಿವಾಜಿ ಉದ್ಯಾನವನದಿಂದ ಟಿಳಕವಾಡಿಯಲ್ಲಿ ಮೆರವಣಿಗೆ ನಡೆಸಿ ನಂತರ ಮರಾಠಾ ಮಂದಿರದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲು ನಿರ್ಧರಿಸಲಾಗಿದೆ.



ಸಮಿತಿಯ ಮುಖಂಡರಾದ ವಿಕಾಸ ಕಲಘಟಗಿ ಮತ್ತು ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಗಡಿ ವಿಷಯಗಳ 'ಸಮನ್ವಯ ಸಮಿತಿ' ಯ ಮುಖಂಡರಾದ ಸಚಿವ ಚಂದ್ರಕಾಂತ ಪಾಟೀಲ, ಸಚಿವ ಶಂಭುರಾಜೆ ದೇಸಾಯಿ, ಲೋಕಸಭಾ ಸದಸ್ಯರಾದ ಸೀಮಾ ಪ್ರಜ್ನ, ಧರ್ಮಶೀಲ ಮಾನೆ, ಮಾಜಿ ಸಚಿವ, ರೈತ ಸಂಘಟನೆ ನಾಯಕರಾದ ಸದಾಭಾವು ಖೋತ ಸೇರಿದಂತೆ ಸುಮಾರು 12 ನಾಯಕರಿಗೆ 'ಕಪ್ಪುದಿನ' ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಮಂತ್ರಣ ನೀಡಲಾಗಿದೆ. ಇದಕ್ಕೆ ಕೆಲವರು ಒಪ್ಪಿಗೆ ನೀಡಿದ್ದು ಇನ್ನೂ ಕೆಲವರು ಸಮಯದ ಲಭ್ಯತೆಯ ಪ್ರಕಾರ ತಿಳಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.



ನಾಡದ್ರೋಹಿಗಳ ಈ ನಿಯೋಜಿತ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದೆಂದು ಹಲವು ಕನ್ನಡ ಸಂಘಟನೆಗಳು ಸರಕಾರಕ್ಕೆ ಆಗ್ರಹಿಸಿವೆ. ಆದರೆ, 'ಕಪ್ಪುದಿನ' ಆಚರಣೆಗಾಗಿ ಮೆರವಣಿಗೆ ನಡೆಸಲು ಅನುಮತಿ ಕೋರುತ್ತೇವೆ, ಅನುಮತಿ ದೊರೆಯದಿದ್ದರೂ ಆಚರಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಮಿತಿ ನಾಯಕರು ಹೇಳಿದ್ದಾರೆ.



ಕರ್ನಾಟಕ ರಾಜ್ಯೋತ್ಸವ ಹತ್ತಿರ ಬರುತ್ತಿದಂತೆ ಕರ್ನಾಟಕದಲ್ಲಿರುವ ಮರಾಠಿಗರ ಓಲೈಕೆಗೆ ಮುಂದಾಗಿರುವ ಮಹಾರಾಷ್ಟ್ರ ಸರಕಾರ ಬುಧವಾರ ಮುಂಬಯಿಯಲ್ಲಿ ಗಡಿ ಪ್ರದೇಶ ಕುರಿತು "ಉನ್ನತಾಧಿಕಾರ" ದ ಸಭೆ ಏರ್ಪಡಿಸಿತ್ತು. ಸಭೆಯಲ್ಲಿ  15 ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ಸರ್ವ ಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಆಸ್ಸಾಮ ಮತ್ತು ಮೇಘಾಲಯಗಳ ಗಡಿ ಸಮಸ್ಯೆ ಇತ್ಯರ್ಥ ಪಡಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಕರ್ನಾಟಕದಲ್ಲಿರುವ ಮರಾಠಿಗರ ಬೇಕು, ಬೇಡಗಳಿಗೆ ತೀವ್ರವಾಗಿ ಸ್ಪಂದಿಸಲು ಬೆಳಗಾವಿ ಗಡಿಗೆ ಹೊಂದಿಕೊಂಡಿರುವ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲ್ಲೂಕಿನಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪನೆ ಮಾಡುವುದು, ಕರ್ನಾಟಕದಲ್ಲಿರುವ ಮರಾಠಿಗರಿಗೆ 5 ಲಕ್ಷ ರೂಪಾಯಿವರೆಗೆ ಉಚಿತ ಆರೋಗ್ಯ ವಿಮೆ ನೀಡುವುದು, ಇದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ಸೇರಿದಂತೆ ಹಲವು ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.



ಚಂದಗಡದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕಚೇರಿಯಲ್ಲಿ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರಕ್ಕೆ ಸೇರಲು ಆಗ್ರಹಿಸಿರುವ 865 ಗ್ರಾಮ, ಪಟ್ಟಣ ಮತ್ತು ನಗರಗಳು ಮಹಾರಾಷ್ಟ್ರದ ಭಾಗಗಳಾಗಿವೆ ಎಂಬ ಕುರಿತು ಹಳೆಯ ದಾಖಲೆಗಳಿದ್ದರೆ ನೀಡಬಹುದು ಎಂದು ಆಗ್ರಹಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ