LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕುಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ: 3 ಸಿಆರ್‌ಪಿಎಫ್ ಯೋಧರಿಗೆ ಗಾಯ

ಶ್ರೀನಗರ, ನ. 11: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಭಯೋತ್ಪಾದಕರು ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಭದ್ರತಾ ತಪಾಸಣಾ ಕೇಂದ್ರದ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ದಾಳಿಯ ಬಳಿಕ ಉಗ್ರರು ಬೈಕ್‌ನಲ್ಲಿ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಕುಲ್ಗಾಮ್ ಜಿಲ್ಲೆಯ ಮೀರ್ ಬಜಾರ್ ಸಮೀಪದ ನೌಪೋರಾ ಅಖ್ರಾನ್ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 2.15ರ ವೇಳೆಗೆ ಈ ಘಟನೆ ನಡೆದಿದೆ. ಸಿಆರ್‌ಪಿಎಫ್‌ನ 46ನೇ ಬೆಟಾಲಿಯನ್‌ಗೆ ಸೇರಿದ ಯೋಧರು ತಪಾಸಣಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ಶಸ್ತ್ರಸಜ್ಜಿತ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ದಾಳಿಯ ದೃಶ್ಯಗಳು ಸಮೀಪದ ಕಣ್ಗಾವಲು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸುಮಾರು 15 ಸೆಕೆಂಡುಗಳಲ್ಲಿ 30 ಸುತ್ತು ಗುಂಡು ಹಾರಾಟ ನಡೆದಿರುವುದಾಗಿ ವರದಿಯಾಗಿದೆ.

ದಾಳಿಯಲ್ಲಿ ರಾಕೇಶ ದಾಸ್, ಸಂತೋಷ ಚಂದ್ರು ಹಾಗೂ ಸೋಮ್‌ವೀರ್ ಸಿಂಗ್ ಗಾಯಗೊಂಡಿದ್ದಾರೆ. ರಾಕೇಶ ದಾಸ್ ಅವರ ಎಡಗಾಲಿಗೆ ಗುಂಡೇಟು ತಗುಲಿದ್ದರೆ, ಸಂತೋಷ ಚಂದ್ರು ಅವರ ಹೊಟ್ಟೆ ಹಾಗೂ ಬೆನ್ನುಮೂಳೆಯ ಭಾಗಕ್ಕೆ ಗಾಯಗಳಾಗಿವೆ. ಸೋಮ್‌ವೀರ್ ಸಿಂಗ್ ಅವರ ಎಡಗೈಗೆ ಗಾಯವಾಗಿದೆ.

ಗಾಯಾಳುಗಳನ್ನು ತಕ್ಷಣವೇ ಅನಂತನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಒಬ್ಬ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದ್ದರೂ, ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿವೆ. ಪ್ರಮುಖ ರಸ್ತೆಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ನಿವಾಸಿಗಳು ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

ಕುಲ್ಗಾಮ್‌ನಲ್ಲೇ ಇದ್ದ ಲೆಫ್ಟಿನೆಂಟ್ ಗವರ್ನರ್

ದಾಳಿ ನಡೆದ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕುಲ್ಗಾಮ್ ಜಿಲ್ಲೆಯಲ್ಲೇ ಇದ್ದರು. ಸರ್ಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ 'ವೆಶೋ ಉತ್ಸವ'ದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಆದರೆ ದಾಳಿ ನಡೆದ ಸ್ಥಳದ ಸಮೀಪದಲ್ಲಿ ಅವರು ಇರಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ಈ ದಾಳಿ ನಡೆದಿದೆ. ಜನಸಂಚಾರವಿರುವ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲೇ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ದಾಳಿಯ ಹೊಣೆಗಾರಿಕೆಯನ್ನು ಯಾವುದೇ ಸಂಘಟನೆ ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ದಾಳಿಕೋರರ ಗುರುತು ಹಾಗೂ ಅವರ ಸಂಘಟನೆಯ ಸಂಪರ್ಕದ ಕುರಿತು ತನಿಖೆ ಮುಂದುವರಿದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ: ಬೆಳಗಾವಿ ಅಧಿವೇಶನದಲ್ಲಿ ಭರವಸೆ ಈಡೇರಿಸಲು ಗಡುವುಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್