Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಾಲಿನ ದರ ಏರಿಕೆ ಅನಿವಾರ್ಯ: ಡಿ.ಕೆ. ಶಿವಕುಮಾರ ಸಮರ್ಥನೆ

ಬೆಂಗಳೂರು, ಅ. 31: ಜಾನುವಾರುಗಳ ಮೇವಿನ ಬೆಲೆ, ಇಂಧನ ಹಾಗೂ ಪ್ಯಾಕೇಜಿಂಗ್ ವೆಚ್ಚ ಹೆಚ್ಚಳ ಮತ್ತು ಬರಗಾಲದಿಂದ ಹಾಲಿನ ಸಂಗ್ರಹಣೆಯಲ್ಲಿ ಉಂಟಾಗಿರುವ ಕುಸಿತದ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಿಸುವುದು ಅನಿವಾರ್ಯವಾಗಿತ್ತು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಮರ್ಥಿಸಿಕೊಂಡಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಹೈನುಗಾರರ ಜೀವನೋಪಾಯ ರಕ್ಷಿಸುವುದರ ಜತೆಗೆ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 1ರಿಂದ ಜಾರಿಗೆ ಬರುವ ಪರಿಷ್ಕೃತ ದರದಂತೆ ಪ್ರತಿ ಲೀಟರ್ ಹಾಲಿನ ಬೆಲೆ ₹8 ಹೆಚ್ಚಾಗಲಿದೆ. ಇದರಲ್ಲಿ ₹7 ನೇರವಾಗಿ ಹಾಲು ಉತ್ಪಾದಕರಿಗೆ ದೊರೆಯಲಿದ್ದು, ರೈತರಿಗೆ ನೀಡಲಾಗುತ್ತಿದ್ದ ಪ್ರತಿ ಲೀಟರ್ ಹಾಲಿನ ದರ ₹35ರಿಂದ ₹42ಕ್ಕೆ ಏರಿಕೆಯಾಗಲಿದೆ. ಸರ್ಕಾರದ ₹5 ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ ಲೀಟರ್‌ಗೆ ಒಟ್ಟು ₹47 ದೊರೆಯಲಿದೆ ಎಂದು ವಿವರಿಸಿದ್ದಾರೆ.

ಈ ನಿರ್ಧಾರದಿಂದ ದಿನಕ್ಕೆ 10 ಲೀಟರ್ ಹಾಲು ಪೂರೈಸುವ ರೈತನಿಗೆ ತಿಂಗಳಿಗೆ ಸುಮಾರು ₹2,100 ಹೆಚ್ಚುವರಿ ಆದಾಯ ಸಿಗಲಿದೆ. ರಾಜ್ಯದ ಗ್ರಾಮೀಣ ಹೈನುಗಾರ ಕುಟುಂಬಗಳಿಗೆ ವಾರ್ಷಿಕ ₹1,850 ಕೋಟಿಯಿಂದ ₹2,100 ಕೋಟಿವರೆಗೆ ಹೆಚ್ಚುವರಿ ಆದಾಯ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 28.84 ಲಕ್ಷ ಹೈನುಗಾರರಿದ್ದು, ಕರ್ನಾಟಕ ಹಾಲು ಮಹಾಮಂಡಳದ ಸದಸ್ಯರಲ್ಲಿ ಶೇ.67ರಷ್ಟು ಸಣ್ಣ ಮತ್ತು ಅತಿಸಣ್ಣ ರೈತರಿದ್ದಾರೆ. ಹಾಲು ಉತ್ಪಾದನೆಯಲ್ಲಿ ತೊಡಗಿರುವ ಈ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಲು ಹಾಗೂ ಅವರ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ನೀಡಲು ದರ ಪರಿಷ್ಕರಣೆ ಅಗತ್ಯವಾಗಿತ್ತು ಎಂದು ಪ್ರತಿಪಾದಿಸಿದ್ದಾರೆ.

ದರ ಏರಿಕೆಯ ನಂತರವೂ ನಂದಿನಿ ಟೋನ್ಡ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ ₹54 ಇರಲಿದ್ದು, ದೇಶದ ಹಲವು ಪ್ರಮುಖ ಹಾಲು ಉತ್ಪಾದನಾ ಸಂಸ್ಥೆಗಳ ದರಕ್ಕಿಂತ ಕಡಿಮೆಯಾಗಿದೆ. ಶೇ.4.5ರಷ್ಟು ಕೊಬ್ಬಿನಾಂಶ ಹೊಂದಿರುವ ನಂದಿನಿ ಶುಭಂ ಹಾಲಿನ ದರ ₹60 ಆಗಲಿದ್ದು, ಇತರ 10 ರಾಜ್ಯಗಳ ಸರಾಸರಿ ದರ ₹62.80ಕ್ಕಿಂತ ಕಡಿಮೆಯೇ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಹಾಲು ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವುದರಿಂದ ರೈತರಿಗೆ ನ್ಯಾಯಯುತ ಬೆಲೆ ದೊರಕಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ಆರ್ಥಿಕ ಹಿತಾಸಕ್ತಿ ಮತ್ತು ಗ್ರಾಹಕರಿಗೆ ಗುಣಮಟ್ಟದ ಹಾಲಿನ ಪೂರೈಕೆ ನಡುವೆ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

Author
Samadarshi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST