LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಧಾರವಾಡ ಜಿಲ್ಲೆಯಲ್ಲಿ ಮೂರು ದಿನ ಸಚಿವ ಸಂತೋಷ ಲಾಡ್‌ ಪ್ರವಾಸ; ಅತಿವೃಷ್ಟಿ-ಬರ ಪರಿಸ್ಥಿತಿ ಪರಿಶೀಲನೆ

ಬೆಂಗಳೂರು, ಆಗಸ್ಟ್‌ 4: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಂತೋಷ ಲಾಡ್‌ ಅವರು ಬುಧವಾರದಿಂದ ಧಾರವಾಡ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ಸರ್ಕಾರಕ್ಕೆ ವಾಸ್ತವ ವರದಿ ಸಲ್ಲಿಸುವ ಉದ್ದೇಶದಿಂದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ. ಅದರಂತೆ ಧಾರವಾಡ ಜಿಲ್ಲೆಯ ಜವಾಬ್ದಾರಿ ಸಂತೋಷ ಲಾಡ್‌ ಅವರಿಗೆ ನೀಡಲಾಗಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ ಅವರು ಬುಧವಾರದಿಂದಲೇ ಪ್ರವಾಸ ಆರಂಭಿಸಲಿದ್ದಾರೆ.

ಪ್ರವಾಸದ ಮೊದಲ ದಿನವಾದ ಬುಧವಾರ ಬೆಳಿಗ್ಗೆ ಕಲಘಟಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು, ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.

ಅದೇ ದಿನ ಮಧ್ಯಾಹ್ನ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಿದ್ದಾರೆ.

ಗುರುವಾರ ಬೆಳಿಗ್ಗೆ ನವಲಗುಂದ ವಿಧಾನಸಭಾ ಕ್ಷೇತ್ರದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚಿಸಿ, ಬಳಿಕ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಕುಂದಗೋಳ ವಿಧಾನಸಭಾ ಕ್ಷೇತ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ಶುಕ್ರವಾರ ಅಳ್ನಾವರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದು, ಬಳಿಕ ಸ್ಥಳೀಯ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ