ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಸಕ ರೇಣುಕಾಚಾರ್ಯ ಸಹೋದರ ಪುತ್ರನ ಶವ ಪತ್ತೆ

ದಾವಣಗೆರೆ: ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ ಶವ ಪತ್ತೆಯಾಗಿದೆ. ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ.

ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು, ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.

ಈಗಾಗಲೇ ಕಾರನ್ನು ಮೇಲಕ್ಕೆ ಎತ್ತಿದ ಪೊಲೀಸರಿಗೆ ಕಾರಿನಲ್ಲಿ ಚಂದ್ರಶೇಖರ ಶವ ಪತ್ತೆಯಾಗಿರುವುದು ತಿಳಿದು ಬಂದಿದೆ.

ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ ನಾಪತ್ತೆಯಾಗಿ 5 ದಿನವಾದರೂ ಸುಳಿವು ಸಿಕ್ಕಿರಲಿಲ್ಲ. ಚಂದ್ರಶೇಖರ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದರು, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದರು. ಚಂದ್ರಶೇಖರನ ಮೊಬೈಲ್ ಸ್ವಿಚ್ ಆಫ್ ಆಗಿ 5 ದಿನ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ, ಆದರೆ ಈಗ ಮೃತದೇಹ ಪತ್ತೆಯಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.