LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಮೊಬೈಲ್ ಟವರ್ ಆಮಿಷ, ಫೇಸ್‌ಬುಕ್ ಲಿಂಕ್: ಅಥಣಿಯ ಇಬ್ಬರು ರೈತರಿಗೆ ₹4.04 ಲಕ್ಷ ವಂಚನೆ

ಅಥಣಿ, ಅ. 5 : (ಸಮದರ್ಶಿ ಸುದ್ದಿ) - ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಅಥಣಿ ತಾಲೂಕಿನ ಇಬ್ಬರು ರೈತರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ₹4,04,200 ಕಳೆದುಕೊಂಡಿದ್ದಾರೆ. ಒಬ್ಬ ರೈತನಿಗೆ ಜಮೀನಿನಲ್ಲಿ ಮೊಬೈಲ್ ಟವರ್ ಅಳವಡಿಸುವ ಆಮಿಷವೊಡ್ಡಿ ಹಣ ಪಡೆದುಕೊಂಡಿದ್ದರೆ, ಮತ್ತೊಬ್ಬ ರೈತ ಫೇಸ್‌ಬುಕ್‌ನಲ್ಲಿ ಕಂಡ ಲಿಂಕ್ ಕ್ಲಿಕ್ ಮಾಡಿದ ಬಳಿಕ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಯಾಗಿದೆ.

ಕೊಡಗಾನೂರ ಗ್ರಾಮದ ರೈತ ಬಾಬಾಸಾಹೇಬ ಹರಗೆ ಅವರಿಗೆ ವಿವಿಧ ಮೊಬೈಲ್ ಸಂಖ್ಯೆಗಳಿಂದ ಕರೆ ಮಾಡಿದ ವಂಚಕರು, ಅವರ ಜಮೀನಿನಲ್ಲಿ ಮೊಬೈಲ್ ಟವರ್ ಅಳವಡಿಸುವುದಾಗಿ ನಂಬಿಸಿದ್ದಾರೆ. ಟವರ್ ಅಳವಡಿಸಿದರೆ ತಿಂಗಳಿಗೆ ₹50 ಸಾವಿರ ಬಾಡಿಗೆ ಹಾಗೂ 10 ವರ್ಷಗಳ ಒಪ್ಪಂದ ಮಾಡಿಕೊಡುವುದಾಗಿ ಆಮಿಷವೊಡ್ಡಿದ್ದರು.

ಅಲ್ಲದೆ ₹60 ಲಕ್ಷ ಠೇವಣಿ ನೀಡುವುದಾಗಿಯೂ ಹೇಳಿ ನಂಬಿಕೆ ಮೂಡಿಸಿದ್ದರು. ವಂಚಕರ ಮಾತು ನಂಬಿದ ಹರಗೆ ವಿವಿಧ ಹಂತಗಳಲ್ಲಿ ಒಟ್ಟು ₹1,04,700 ವರ್ಗಾಯಿಸಿದ್ದಾರೆ. ನಂತರ ಒಪ್ಪಂದ ಪತ್ರ ಕೇಳಿದಾಗ ಮತ್ತಷ್ಟು ₹60 ಸಾವಿರ ಪಾವತಿಸುವಂತೆ ವಂಚಕರು ಕೇಳಿದ್ದು, ₹30 ಲಕ್ಷ ಮರಳಿ ನೀಡುವುದಾಗಿಯೂ ಹೇಳಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಅವರ್‌ಖೋಡ ಗ್ರಾಮದ ರೈತ ಬಸವರಾಜ ನಾಯಕ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ಲಿಂಕ್ ಒಂದನ್ನು ಕ್ಲಿಕ್ ಮಾಡಿದ ಬಳಿಕ ಅವರ ಬ್ಯಾಂಕ್ ಖಾತೆಯಿಂದ ಆನ್‌ಲೈನ್ ಮೂಲಕ ₹2,99,500 ವರ್ಗಾವಣೆಯಾಗಿದೆ ಎಂದು ದೂರಲಾಗಿದೆ.

ತಾವು ವಂಚನೆಗೊಳಗಾಗಿರುವುದು ಗೊತ್ತಾದ ಬಳಿಕ ಇಬ್ಬರೂ ಪೊಲೀಸರ ಮೊರೆ ಹೋಗಿದ್ದಾರೆ. ಈ ಸಂಬಂಧ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಗಳು, ಮೊಬೈಲ್ ಸಂಖ್ಯೆಗಳು ಹಾಗೂ ಆನ್‌ಲೈನ್ ವ್ಯವಹಾರಗಳ ಜಾಡು ಹಿಡಿದು ತನಿಖೆ ನಡೆಸಲಾಗುತ್ತಿದೆ

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಡಿಲು ಬಡಿದು ಎರಡು ಹಸು ಸಾವುಐಎಚ್‌ಆರ್‌ಸಿ ಬೆಳಗಾವಿ ಜಿಲ್ಲಾ ಮಂಡಳಿ ಅಧ್ಯಕ್ಷರಾಗಿ ಅಬ್ದುಲ್ ಅಜೀಜ ಶೇಖ ನೇಮಕಚುಳಕಿಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ-ಖೋಖೋ ಕ್ರೀಡಾಕೂಟಕ್ಕೆ ಚಾಲನೆಮೊಬೈಲ್ ಟವರ್ ಆಮಿಷ, ಫೇಸ್‌ಬುಕ್ ಲಿಂಕ್: ಅಥಣಿಯ ಇಬ್ಬರು ರೈತರಿಗೆ ₹4.04 ಲಕ್ಷ ವಂಚನೆಅಥಣಿ ಲಾಡ್ಜನಲ್ಲಿ ವೇಶ್ಯಾವಾಟಿಕೆ ಆರೋಪ: ಮಹಿಳೆ ರಕ್ಷಣೆ, ಓರ್ವ ಬಂಧನಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಜಗಳ: ಪತ್ನಿಯನ್ನು ಕುಡಗೋಲಿನಿಂದ ಕೊಚ್ಚಿ ಹತ್ಯೆಬಿಜೆಪಿ ಮುಖಂಡ ರವಿ ಪಾಟೀಲಗೆ ನಿರೀಕ್ಷಣಾ ಜಾಮೀನುಮೋದಿ-ಶಾ ಸೂಚನೆಯಂತೆ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದ್ರೋಹ: ಕಾಂಗ್ರೆಸ್ಮಹಿಳಾ ಪತ್ರಕರ್ತೆಯರ ಪೊಲೀಸರ ಲೈಂಗಿಕ ಕಿರುಕುಳ ; ಎಫ್‌ಐಆರ್‌ಗೆ ಒತ್ತಾಯಿಸಿದವರು ವಶಕ್ಕೆಇದು ಗುಜರಾತ್, ಯುಪಿ ಅಲ್ಲ; ಕಾನೂನು ಮುರಿದರೆ ಪರಿಣಾಮ ಎದುರಿಸಿ: ಪ್ರಿಯಾಂಕ್ ಖರ್ಗೆ