LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಂತಿಯುತ ಹೋರಾಟವನ್ನೂ ಸಹಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿ

ಹೊಸದಿಲ್ಲಿ, ಜುಲೈ 18: ಜಂತರ್ ಮಂತರ್‌ನಲ್ಲಿ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹದ ಮಧ್ಯೆ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಶಾಂತಿಯುತ ಪ್ರತಿಭಟನೆಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಅಹಿಂಸಾತ್ಮಕ ಉಪವಾಸ ಸತ್ಯಾಗ್ರಹದಲ್ಲಿದ್ದ ಸೋನಮ್ ವಾಂಗ್ಚುಕ ಅವರನ್ನು ಬಲವಂತವಾಗಿ ತೆರವುಗೊಳಿಸಿರುವುದು ತಪ್ಪು ಎಂದು ಹೇಳಿದ್ದಾರೆ. ಅಸತ್ಯ ಮತ್ತು ಹಿಂಸೆ ಕೇಂದ್ರ ಸರ್ಕಾರದ ಆಡಳಿತದ ಮೂಲ ತತ್ವಗಳಾಗಿವೆ ಎಂದು ಅವರು ಟೀಕಿಸಿದ್ದಾರೆ.

ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ವೆಚ್ಚದ ಏರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಗಳಂತಹ ಗಂಭೀರ ಸಮಸ್ಯೆಗಳು ಎದುರಿರುವ ಸಂದರ್ಭದಲ್ಲಿ, ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗ ನಡೆಸುವುದರಿಂದ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ವಾಂಗ್ಚುಕ ಅವರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲವಿದೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

ಇದರ ನಡುವೆ, ಸೋನಮ್ ವಾಂಗ್ಚುಕ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ ನಿರ್ದೇಶನ ಮತ್ತು ವೈದ್ಯಕೀಯ ತಜ್ಞರ ಸಲಹೆಯಂತೆ ಅವರನ್ನು ಸಫ್ದರಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಅಡಚಣೆ ಉಂಟುಮಾಡಲು ಯತ್ನಿಸಿದ ಕಾರಣ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾದರೂ, ಪೊಲೀಸರು ಸಂಯಮದಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಆದರೆ, ಪೊಲೀಸರ ಈ ಹೇಳಿಕೆಯನ್ನು ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ (ಸಿಜೆಪಿ) ತಿರಸ್ಕರಿಸಿದೆ. ಉಪವಾಸ ಸತ್ಯಾಗ್ರಹದ 21ನೇ ದಿನವೂ ವಾಂಗ್ಚುಕ ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಹಿನ್ನಡೆ ಕಾಣಿಸಿಕೊಂಡಿರಲಿಲ್ಲ ಎಂದು ಸಂಘಟನೆ ಹೇಳಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದಿರುವ ಕ್ರಮವನ್ನು ಪೊಲೀಸರಿಂದ ನಡೆದ "ಅಪಹರಣ" ಎಂದು ಸಿಜೆಪಿ ಬಣ್ಣಿಸಿದ್ದು, ಸಂಸತ್ ಮುತ್ತಿಗೆ ಕಾರ್ಯಕ್ರಮಕ್ಕೆ ಎರಡು ದಿನ ಬಾಕಿ ಇರುವಾಗ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದೆ.

ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್, ವಾಂಗ್ಚುಕ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಹೈಕೋರ್ಟ ಯಾವುದೇ ನಿರ್ದೇಶನ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲು ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿಲ್ಲ ಎಂದು ಆರೋಪಿಸಿರುವ ಅವರು, ಬೆಳೆಯುತ್ತಿದ್ದ ಪ್ರತಿಭಟನಾ ಚಳುವಳಿಯನ್ನು ಹತ್ತಿಕ್ಕುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಿಡಿಕಾರಿದ್ದಾರೆ.

ಸೋನಮ್ ವಾಂಗ್ಚುಕ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ, ತಮ್ಮ ಪತಿ ಇನ್ನೂ ಉಪವಾಸ ಸತ್ಯಾಗ್ರಹದಲ್ಲೇ ಇದ್ದಾರೆ ಎಂದು ತಿಳಿಸಿದ್ದಾರೆ. ಜುಲೈ 20ರಂದು ಸಂಸತ್ತಿಗೆ ಯೋಜಿಸಿರುವ ಮೆರವಣಿಗೆ ನಿಗದಿಯಂತೆ ನಡೆಯಲಿದ್ದು, ವಾಂಗ್ಚುಕ ಭಾಗವಹಿಸಲು ಸಾಧ್ಯವಾಗದಿದ್ದರೆ ತಾವೇ ಮೆರವಣಿಗೆಯ ನೇತೃತ್ವ ವಹಿಸುವುದಾಗಿ ಹೇಳಿದ್ದಾರೆ.

ಇನ್ನೊಂದೆಡೆ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿನಿ ನೇಹಾ ಬೋರಾ ತಮ್ಮ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ. ಸೋನಮ್ ವಾಂಗ್ಚುಕ ಅವರನ್ನು ಮುಂಜಾನೆ ಪೊಲೀಸರು ಕರೆದೊಯ್ದ ಬಳಿಕ ಪ್ರತಿಭಟನಾ ಸ್ಥಳದಲ್ಲಿದ್ದ ಇತರ ವಿದ್ಯಾರ್ಥಿಗಳನ್ನು ತೆರವುಗೊಳಿಸಲು ಹಾಗೂ ಬಂಧಿಸಲು ಪೊಲೀಸರು ಯತ್ನಿಸಿದರು ಎಂದು ಅವರು ಆರೋಪಿಸಿದ್ದಾರೆ.

ಬೆಳಿಗ್ಗೆ ಸುಮಾರು 7 ಗಂಟೆ ವೇಳೆಗೆ ಸಾಮಾನ್ಯ ಉಡುಪಿನಲ್ಲಿದ್ದ ಕೆಲವರು ವೇದಿಕೆ ಪ್ರದೇಶ ಪ್ರವೇಶಿಸಿದ್ದು, ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಆಗಮಿಸಿದರು. ವೈದ್ಯಕೀಯ ಚಿಕಿತ್ಸೆಯ ಹೆಸರಿನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್ಚುಕ ಅವರನ್ನು ಬಲವಂತವಾಗಿ ಅಲ್ಲಿಂದ ಕರೆದೊಯ್ಯಲಾಯಿತು ಎಂದು ನೇಹಾ ಹೇಳಿದ್ದಾರೆ.

ನಂತರ ಆರ್‌ಎಫ್‌ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿಭಟನಾ ಶಿಬಿರದ ಬೇಲಿಯನ್ನು ದಾಟಿ ಉಪವಾಸ ನಿರತರನ್ನು ಬಂಧಿಸಲು ಯತ್ನಿಸಿದರು. ಸ್ಥಳದಲ್ಲಿದ್ದ ಸ್ವಯಂಸೇವಕರಿಂದ ಅದು ಸಾಧ್ಯವಾಗಲಿಲ್ಲ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿ ಶಾಂತಿಯುತ ಪ್ರತಿಭಟನೆಯನ್ನು ಬಲಪ್ರಯೋಗದಿಂದ ಕೊನೆಗೊಳಿಸಲು ದೆಹಲಿ ಪೊಲೀಸರು ಪ್ರಯತ್ನಿಸಿದ್ದು ನಾಚಿಕೆಗೇಡಿನ ಸಂಗತಿ ಎಂದು ನೇಹಾ ಬೋರಾ ಆರೋಪಿಸಿರುವುದಾಗಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಗೊತ್ತುವಳಿ ಅಂಗೀಕರಿಸಿ; ಸರ್ಕಾರಕ್ಕೆ ನಾಗಮೋಹನ ದಾಸ್ ಪತ್ರಆಸ್ತಿ ಆಸೆಗೆ ಮೈದುನರ ಹತ್ಯೆ; ಯರಗಟ್ಟಿಯ ಅವಳಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರುಶಾಂತಿಯುತ ಹೋರಾಟವನ್ನೂ ಸಹಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಸಾವು, 9 ಮಂದಿಗೆ ಗಂಭೀರ ಗಾಯಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನವಾಂಗ್ಚುಕ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅಭಿಜೀತ ದೀಪ್ಕೆ ಉಪವಾಸ ಆರಂಭ: ‘ಚಲೋ ಸಂಸದ’ ಹೋರಾಟ ಮುಂದುವರಿಕೆ ಘೋಷಣೆಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ‘ವಿಕ್ರಮ–1’ಜಂತರ್ ಮಂತರ್‌ನಲ್ಲಿ ಅಭಿಜೀತ ಮೇಲೆ ನೀಲಿ ಶಾಯಿ ಎರಚಿದ ಮಹಿಳೆವಾಂಗ್ಚುಕ ಹೋರಾಟ ಇಲ್ಲಿಗೇ ಮುಗಿಯದು, ಸಂಸತ್ತಲ್ಲೂ ಪ್ರಸ್ತಾಪಿಸುವೆವು : ಶರದ ಪವಾರವಾಂಗ್ಚುಕರನ್ನು ಬಲವಂತವಾಗಿ ಆಸ್ಪತ್ರೆಗೆ ಹೊತ್ತೊಯ್ದ ಪೊಲೀಸರು; ಹೋರಾಟ ಮತ್ತಷ್ಟು ತೀವ್ರ