LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
International News

ತಂದೆಯ ಸಾವಿಗೆ ಸೇಡು ತೀರಿಸಿಕೊಳ್ಳುವುದಾಗಿ ಮೊಜ್ತಬಾ ಖಮೇನಿ ಪ್ರತಿಜ್ಞೆ

ತಂದೆಯ ಸಾವಿಗೆ ಪ್ರತೀಕಾರ ತೀರಿಸಿಯೇ ತೀರುತ್ತೇವೆ: ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಶಪಥ

ತೆಹರಾನ್: ಎರಡು ಯುದ್ಧಗಳಲ್ಲಿ ಮೃತಪಟ್ಟ ಎಲ್ಲ ಹುತಾತ್ಮರ ರಕ್ತಕ್ಕೂ ಹಾಗೂ ತಮ್ಮ ತಂದೆ ಆಯತೊಲ್ಲಾ ಅಲಿ ಖಮೇನಿ ಅವರ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಘೋಷಿಸಿದ್ದಾರೆ.

ದೇಶದ ಜನರನ್ನುದ್ದೇಶಿಸಿ ಬಿಡುಗಡೆ ಮಾಡಿದ ಲಿಖಿತ ಸಂದೇಶದಲ್ಲಿ ಮಾತನಾಡಿರುವ ಮೊಜ್ತಬಾ ಖಮೇನಿ, "ತಂದೆಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದು ಇಡೀ ರಾಷ್ಟ್ರದ ಸಂಕಲ್ಪವಾಗಿದೆ. ಆ ಪ್ರತೀಕಾರ ಖಂಡಿತವಾಗಿಯೂ ತೀರಿಸಲಾಗುತ್ತದೆ" ಎಂದು ಹೇಳಿದ್ದಾರೆ.

ಆಯತೊಲ್ಲಾ ಅಲಿ ಖಮೇನಿ ಅವರ ಅಂತಿಮಯಾತ್ರೆ ಅವರ ತವರು ಹಾಗೂ ಶಿಯಾ ಮುಸ್ಲಿಮರ ಪ್ರಮುಖ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಈಶಾನ್ಯ ಇರಾನ್‌ನ ಮಶಾದ್ ನಗರದಲ್ಲಿ ಭಾರಿ ಜನಸ್ತೋಮದ ನಡುವೆ ನೆರವೇರಿತ್ತು. ಅವರ ಅಂತ್ಯಕ್ರಿಯೆಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳು ಜುಲೈ 4ರಿಂದ 9ರವರೆಗೆ ನಡೆದಿದ್ದವು.

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ನಡೆಸಿದ ಯುದ್ಧದ ಮೊದಲ ದಿನವಾದ ಫೆಬ್ರುವರಿ 28ರಂದು ನಡೆದ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದರು. ಮೃತಪಟ್ಟ ವೇಳೆ ಅವರಿಗೆ 86 ವರ್ಷ ವಯಸ್ಸಾಗಿತ್ತು.

ಈ ದಾಳಿಯಲ್ಲಿ ಮೊಜ್ತಬಾ ಖಮೇನಿ ಅವರ ಪತ್ನಿ, ಮೊಮ್ಮಗಳು, ಅಳಿಯ ಹಾಗೂ ಮಗಳೂ ಸಾವಿಗೀಡಾಗಿದ್ದರು. ಅವರನ್ನೂ ಆಯತೊಲ್ಲಾ ಅಲಿ ಖಮೇನಿ ಅವರ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಶಿಯಾ ಮುಸ್ಲಿಮರ ಎಂಟನೇ ಇಮಾಮ್ ಎಂದು ಪೂಜಿಸಲ್ಪಡುವ ಇಮಾಮ್ ರೆಜಾ ಅವರ ದರ್ಗಾ ಆವರಣದಲ್ಲೇ ಆಯತೊಲ್ಲಾ ಅಲಿ ಖಮೇನಿ ಅವರನ್ನು ಸಮಾಧಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ