ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುರುಘಾ ಶೀಗಳಿಗೆ ಎದೆನೋವು : ಆಸ್ಪತ್ರೆಗೆ ದಾಖಲು 

ಚಿತ್ರದುರ್ಗ : ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಬಂಧಿತರಾಗಿರುವ ಮುರಘಾಮಠದ ಶ್ರೀಗಳಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು , ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಶ್ರೀಗಳಿಗೆ ಎದೆನೋವು ಕಾಣಿಸಕೊಂಡ ಹಿನ್ನೆಲೆಯಲ್ಲಿ ಮುರುಘಾಮಠದ ಶ್ರೀಗಳನ್ನು ಜೈಲಿನಿಂದ ಆಸ್ಪತ್ರೆಗೆ ರವಾನಿಸಲಾಗಿದೆ.

ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ಮಠದ ಪರ ವಕೀಲ ಉಮೇಶ, ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ ನೀಡಲೆಂದು ಸ್ವಾಮೀಜಿಯೇ ಪೊಲೀಸರಿಗೆ ಶರಣಾಗಿದ್ದಾರೆ ಎಂದಿದ್ದಾರೆ.

ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾ ಶ್ರೀಗಳು ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.