LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ ಪವಾರ ರಾಜೀನಾಮೆ

ಮುಂಬಯಿ: ನ್ಯಾಷನಲಿಸ್ಟ ಕಾಂಗ್ರೆಸ್ (ಎನ್‌ಸಿಪಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ ಪವಾರ ಹೇಳಿದ್ದು ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ.



ಮಂಗಳವಾರ ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ ಮಾಜೆ ಸಂಗಟಿ’ ಬಿಡುಗಡೆ ಸಮಾರಂಭದಲ್ಲಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದು  ಈ ಸುದೀರ್ಘ ರಾಜಕೀಯ ಜೀವನದ ನಂತರ ಅದನ್ನು ಎಲ್ಲೋ ನಿಲ್ಲಿಸುವ ಬಗ್ಗೆ ಯೋಚಿಸಬೇಕು. ವ್ಯಕ್ತಿಗೆ ದುರಾಸೆ ಇರಬಾರದು ಎಂದಿದ್ದಾರೆ.



ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ. ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ. ನಾನು ನನ್ನ ರಾಜಕೀಯ ಜೀವನವನ್ನು ಮೇ 1, 1960 ರಂದು ಪ್ರಾರಂಭಿಸಿದೆ. 1999 ರಲ್ಲಿ ಎನ್‌ಸಿಪಿ ಪಕ್ಷವನ್ನು ಸ್ಥಾಪಿಸಿದೆ.  ನಿನ್ನೆ ನಾವು ಮೇ ದಿನವನ್ನು ಆಚರಿಸಿದ್ದೇವೆ ಇಂದು ನನ್ನ ನಿರ್ಧಾರ ಪ್ರಕಟಿಸಿದ್ದೇನೆ ಎಂದು  ಹೇಳಿದರು.



ಆಗ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಶರದ  ಪವಾರ ಅವರು ತಮ್ಮ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ,  ನಿರ್ಧಾರವನ್ನು ಹಿಂತೆಗೆದುಕೊಳ್ಳದ ಹೊರತು ಸ್ಥಳದಿಂದ ಹೊರಬರುವುದಿಲ್ಲ ಎಂದು ಬೆದರಿಕೆ ಹಾಕಿದರು.



ಆಗ ಮಾತನಾಡಿದ  ಶರದ ಪವಾರ , ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. ನಿರಂತರ ಪ್ರಯಾಣ ನನ್ನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ ನಾನು ಎಂದಿನಂತೆ ನಿಮ್ಮೆಲ್ಲರಿಗೂ ಸಿಗುತ್ತಿರುತ್ತೇನೆ ಎಂದು ಕಾರ್ಯಕರ್ತರಿಗೆ ತಿಳಿಸಿದರು.



ನಾಲ್ಕು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿ, ಕೇಂದ್ರ ರಕ್ಷಣಾ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿರುವ ಪವಾರ ಅವರು 2019 ರ ನಂತರ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ, ಕಾಂಗ್ರೆಸ್ ಮತ್ತು ನಂತರ ಸೈದ್ಧಾಂತಿಕವಾಗಿ ಶಿವಸೇನೆಯ ವಿರುದ್ಧದ ಒಕ್ಕೂಟವನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.



 



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ