LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸ್ವತಂತ್ರ ಭಾರತದ ಮೊದಲ ಮತದಾರ ನೇಗಿ ಇನ್ನಿಲ್ಲ 

ನವದೆಹಲಿ : ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ (106) ಇಂದು ವಿಧಿವಶರಾಗಿದ್ದಾರೆ. ಇದೇ ತಿಂಗಳು 2 ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಮನೆಯಿಂದ ಕೊನೆಯ ಮತ ಚಲಾಯಿಸಿದ್ದರು.



ಹಿಮಾಚಲ ಪ್ರದೇಶದ ಕಿನ್ನೌರ್ ನಿವಾಸಿ ನೇಗಿಗೆ 106 ವರ್ಷ ವಯಸ್ಸಾಗಿತ್ತು. ನವೆಂಬರ್ 2ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಅವರು ತಮ್ಮ ಮನೆಯಿಂದ ಕೊನೆಯ ಮತ ಚಲಾಯಿಸಿದ್ದರು.



ಮತ ಚಲಾಯಿಸಿದ ನಂತರ ಮಾತನಾಡಿದ ಶ್ಯಾಮ್ ಸರನ್, ಮತದಾನ ಪ್ರಜಾಪ್ರಭುತ್ವದ ಮಹಾನ್ ಹಬ್ಬ ಎಂದು ಹೇಳಿದ್ದರು. ನಾವೆಲ್ಲರೂ ನಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದಿದ್ದರು.



ಜುಲೈ 1, 1917ರಲ್ಲಿ ಜನಿಸಿದ್ದ ನೇಗಿ ಅವರು ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಬಳಿಕ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಹವಾಮಾನದ ಕಾರಣಕ್ಕೆ ಐದು ತಿಂಗಳ ಮುಂಚಿತವಾಗಿಯೇ ಮತದಾನ ನಡೆದಿದ್ದು, ಈ ವೇಳೆ ಮೊಟ್ಟ ಮೊದಲಿಗರಾಗಿ ಶ್ಯಾಮ್ ಸರಣ್ ನೇಗಿ ತಮ್ಮ ಮತ ಚಲಾಯಿಸಿದ್ದರು.



ಜಿಲ್ಲಾಡಳಿತವು ಅತ್ಯಂತ ಹಳೆಯ ಮತದಾರನ ಅಂತಿಮ ವಿಧಿವಿಧಾನಗಳಿಗೆ ವ್ಯವಸ್ಥೆ ಮಾಡುತ್ತಿದೆ. ಅವರನ್ನು ಗೌರವಯುತವಾಗಿ ಕಳುಹಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕಿನ್ನೌರ್ ಅಬಿದ ಹುಸೇನ್ ತಿಳಿಸಿದ್ದಾರೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ