LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿ

ಲಖನೌ, ನ. 12: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಹೊಸ ರಾಜಕೀಯ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಹಾಗೂ ಸಂಸದ ಚಂದ್ರಶೇಖರ ಆಜಾದ್ ನೇತೃತ್ವದ ಆಜಾದ್ ಸಮಾಜ ಪಕ್ಷ (ಕಾನ್ಶಿರಾಮ್) ಕೈಜೋಡಿಸಿವೆ.

ಈ ಮೈತ್ರಿಕೂಟಕ್ಕೆ ‘ಸಾಮಾಜಿಕ ಪರಿವರ್ತನ ಮೋರ್ಚಾ’ ಎಂದು ಹೆಸರಿಡಲಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ಹಾಗೂ ಶೋಷಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಗುರುವಾರ ಲಖನೌನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಒವೈಸಿ ಸಮ್ಮುಖದಲ್ಲಿ ಮೈತ್ರಿಯನ್ನು ಘೋಷಿಸಿದ ಚಂದ್ರಶೇಖರ ಆಜಾದ್, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಸೇರಿದಂತೆ ಇತರ ರಾಜಕೀಯ ಪಕ್ಷಗಳೂ ಈ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ತಿಳಿಸಿದರು.

‘ಇದು ತೃತೀಯ ರಂಗವಲ್ಲ, ಮೊದಲ ರಂಗ’

ಹೊಸ ಮೈತ್ರಿಕೂಟವನ್ನು ತೃತೀಯ ರಂಗ ಎಂದು ಬಣ್ಣಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಜಾದ್, ‘ನಮ್ಮ ಮೈತ್ರಿಯನ್ನು ಕೆಲವರು ತೃತೀಯ ರಂಗ ಎಂದು ಕರೆಯುತ್ತಿದ್ದಾರೆ. ಆದರೆ, ಇದು ತೃತೀಯ ರಂಗವಲ್ಲ. ನಮ್ಮ ಉದ್ದೇಶವನ್ನು ಸರಿಯಾಗಿ ಅರ್ಥಮಾಡಿಕೊಂಡರೆ ಇದು ಮೊದಲ ರಂಗ ಎಂಬುದು ತಿಳಿಯುತ್ತದೆ’ ಎಂದು ಹೇಳಿದರು.

ಬಡವರು, ದಲಿತರು, ಹಿಂದುಳಿದವರು ಹಾಗೂ ಸಮಾಜದ ದುರ್ಬಲ ವರ್ಗಗಳನ್ನು ಒಂದೇ ರಾಜಕೀಯ ವೇದಿಕೆಯಲ್ಲಿ ಸಂಘಟಿಸುವುದು ನಮ್ಮ ಗುರಿಯಾಗಿದೆ. ಈ ಸಮುದಾಯಗಳ ಮತಶಕ್ತಿಯನ್ನು ರಾಜಕೀಯ ಅಧಿಕಾರವಾಗಿ ಪರಿವರ್ತಿಸುವ ಮೂಲಕ ಅವರ ಹಕ್ಕುಗಳನ್ನು ರಕ್ಷಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ವಿಚಾರಧಾರೆಯನ್ನು ಉಲ್ಲೇಖಿಸಿದ ಅವರು, ಶೋಷಿತ ಸಮುದಾಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜಕೀಯ ಅಧಿಕಾರ ಅತ್ಯಂತ ಅಗತ್ಯವಾಗಿದೆ. ರಾಜಕೀಯವಾಗಿ ಸಂಘಟಿತರಾಗದ ಸಮುದಾಯಗಳು ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಶೋಷಿತರ ರಾಜಕೀಯ ಸಬಲೀಕರಣಕ್ಕಾಗಿ ಅಂಬೇಡ್ಕರ ಅವರು ಸ್ವತಂತ್ರ ಕಾರ್ಮಿಕ ಪಕ್ಷ, ಪರಿಶಿಷ್ಟ ಜಾತಿಗಳ ಒಕ್ಕೂಟ ಸೇರಿದಂತೆ ವಿವಿಧ ರಾಜಕೀಯ ಸಂಘಟನೆಗಳ ಮೂಲಕ ಹೋರಾಟ ನಡೆಸಿದ್ದರು. ಅದೇ ಆಶಯದೊಂದಿಗೆ ಹೊಸ ಮೈತ್ರಿಕೂಟ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಹಿಂದಿನ ಸರ್ಕಾರಗಳು ಬಡತನ ನಿರ್ಮೂಲನೆ, ಸಾಮಾಜಿಕ ನ್ಯಾಯ ಹಾಗೂ ಶೋಷಿತ ಸಮುದಾಯಗಳ ಮೇಲಿನ ದೌರ್ಜನ್ಯ ತಡೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ, ಸಮಾಜವಾದಿ ಪಕ್ಷ, ಕಾಂಗ್ರೆಸ್ ಹಾಗೂ ಬಹುಜನ ಸಮಾಜ ಪಕ್ಷಗಳ ನಡುವೆ ರಾಜಕೀಯ ಪೈಪೋಟಿ ನಡೆಯುತ್ತಿರುವ ಸಂದರ್ಭದಲ್ಲಿ ಒವೈಸಿ ಮತ್ತು ಆಜಾದ್ ಅವರ ಹೊಸ ಮೈತ್ರಿ ಮುಂದಿನ ವಿಧಾನಸಭೆ ಚುನಾವಣೆಯ ರಾಜಕೀಯ ಸಮೀಕರಣಗಳ ಮೇಲೆ ಯಾವ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್ಬರ ಪರಿಹಾರ ವಿತರಣೆಯಲ್ಲಿನ ಲೋಪ ಸರಿಪಡಿಸಲು ಸೂಚನೆ