LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ

ದಾವಣಗೆರೆ, ಮೇ 13 : ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳ ವಿರುದ್ಧ ಬಾಲಕನ ಮೇಲಿನ ದೌರ್ಜನ್ಯ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರುದಾರರು ನೀಡಿರುವ ಮಾಹಿತಿ ಹಾಗೂ ಲಭ್ಯ ಸಾಕ್ಷ್ಯಾಧಾರಗಳ ಆಧಾರದ ಮೇಲೆ ವಿಚಾರಣೆ ಮುಂದುವರಿದಿದೆ.

ಈ ಪ್ರಕರಣ ಮೊದಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು. ಆದರೆ ಆರೋಪಿತ ಘಟನೆ ನಡೆದಿರುವ ಸ್ಥಳ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುತ್ತಿರುವುದರಿಂದ ಎಫ್‌ಐಆರ್‌ ಅನ್ನು ಅಲ್ಲಿಗೆ ವರ್ಗಾಯಿಸಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ಸ್ವೀಕರಿಸಿ ಅಧಿಕೃತ ತನಿಖೆ ಆರಂಭಿಸಿದ್ದಾರೆ.

ದೂರು ನೀಡಿದ ಮಹಿಳೆ, ಮಠದ ವಸತಿ ನಿಲಯದಲ್ಲಿ ವಾಸವಾಗಿದ್ದ ತನ್ನ ಮಗನಿಂದ ಸ್ವಾಮೀಜಿ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅವರು ಲಕ್ಷ್ಮೇಶ್ವರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಈಗಾಗಲೇ ದೂರುದಾರರ ಹೇಳಿಕೆ ದಾಖಲಿಸಿಕೊಂಡಿದ್ದು, ಸಂತ್ರಸ್ತ ಬಾಲಕನ ಹೇಳಿಕೆಯನ್ನು ಸಹ ಪಡೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಚ್ಚರಿಕೆಯಿಂದ ತನಿಖೆ ಮುಂದುವರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್‌ ವಚನಾನಂದ ಶ್ರೀಗಳನ್ನು ಗುರುಪೀಠದಿಂದ ಪದಚ್ಯುತಿಗೊಳಿಸಿರುವುದು ಬೆಳಕಿಗೆ ಬಂದಿದೆ. ಗುರುಪೀಠದಲ್ಲಿ ಇದ್ದ ಮಕ್ಕಳಿಂದ ಸೇವೆ ಪಡೆಯಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಗುರುಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಕ್ಕಳ ಹಾಗೂ ಸಂಬಂಧಿತ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಮಗನಿಂದ ಸ್ವಾಮೀಜಿ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ತಾಯಿಯೊಬ್ಬರು ದೂರು ನೀಡಿದ್ದರು. ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾಯಿಸಿರುವುದಾಗಿ ಹಾಗೂ ಸಂತ್ರಸ್ತ ಬಾಲಕನ ಹೇಳಿಕೆಯನ್ನು ಶೀಘ್ರದಲ್ಲೇ ದಾಖಲಿಸಿಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಎಚ್‌.ಟಿ. ಶೇಖರ್‌ ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ತನಿಖೆಯ ಬಳಿಕವೇ ಬಹಿರಂಗವಾಗುವ ಸಾಧ್ಯತೆ ಇದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST