LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ, ಮೇ 15 : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಗೌತಮ್‌ ಅದಾನಿ ವಿರುದ್ಧದ ಆರೋಪಗಳನ್ನು ಕೈಬಿಡಲು ರಾಜಿ ಮಾಡಿಕೊಂಡು ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಗೌತಮ್‌ ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಕೈಬಿಡಲು ಅಮೆರಿಕದ ನ್ಯಾಯಾಂಗ ಇಲಾಖೆ ಮುಂದಾಗಿದೆ ಎಂಬ ವರದಿಗಳ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, ರಾಜಿ ಮಾಡಿಕೊಂಡ ಪ್ರಧಾನಿ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿಲ್ಲ, ಅದಾನಿ ಬಿಡುಗಡೆಗೆ ಚೌಕಾಶಿ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ.

ಭಾರತದ ಸರ್ಕಾರಿ ಸ್ವಾಮ್ಯದ ವಿದ್ಯುತ್‌ ಸರಬರಾಜು ಕಂಪೆನಿಗಳಿಗೆ ಸೌರ ವಿದ್ಯುತ್‌ ಪೂರೈಸುವ ಯೋಜನೆಗಾಗಿ ಅದಾನಿ ಗ್ರೀನ್‌ ಎನರ್ಜಿ ಸಂಸ್ಥೆ 2021ರಿಂದ 2024ರ ಅವಧಿಯಲ್ಲಿ ಅಮೆರಿಕದ ಬ್ಯಾಂಕ್‌ಗಳು ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ₹25 ಸಾವಿರ ಕೋಟಿಗೂ ಅಧಿಕ ಬಂಡವಾಳ ಸಂಗ್ರಹಿಸಿದೆ ಎಂದು ಅಮೆರಿಕದಲ್ಲಿ ಆರೋಪಿಸಲಾಗಿದೆ.

ಈ ಮೊತ್ತದಲ್ಲಿ ₹2,100 ಕೋಟಿಯನ್ನು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಲು ಬಳಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಕುರಿತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಪ್ರತಿಕ್ರಿಯೆ ನೀಡಿದ್ದು, ಅಮೆರಿಕಕ್ಕೆ ಲಾಭವಾಗಿರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ ಯಾಕೆ ಒಪ್ಪಿಕೊಂಡರು ಎಂಬುದು ಇದೀಗ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಆಪರೇಶನ್‌ ಸಿಂಧೂರ್‌ ಅನ್ನು ಏಕಾಏಕಿ ಸ್ಥಗಿತಗೊಳಿಸಿದ ಹಿನ್ನೆಲೆಯೂ ಇದೀಗ ಅರ್ಥವಾಗುತ್ತಿದೆ. ರಾಷ್ಟ್ರದ ಹಿತಕ್ಕಿಂತ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಟ್ರಂಪ್‌ ಆಡಳಿತವು ಮೊದಾನಿ ವಿರುದ್ಧದ ಎಲ್ಲ ಭ್ರಷ್ಟಾಚಾರ ಆರೋಪಗಳನ್ನು ಕೈಬಿಡಲು ಸಿದ್ಧವಾಗಿದೆ ಎಂಬ ವರದಿಗಳು ಬರುತ್ತಿವೆ. ಪ್ರಧಾನಿ ಮೋದಿ ಇನ್ನೆಷ್ಟು ರಾಜಿ ಮಾಡಿಕೊಳ್ಳಲಿದ್ದಾರೆ ಎಂದು ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು