LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮುಂದಿನ ಬಾರಿಯೂ ನಮ್ಮದೇ ಸರಕಾರ -ಯಡಿಯೂರಪ್ಪ

ಬೈಲಹೊಂಗಲ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಪುನಃ ಅಧಿಕಾರ ಸ್ಥಾಪಿಸಲಿದೆ, ಇದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಬೈಲಹೊಂಗಲನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ, ಬಿಜೆಪಿ ಮಾಡಿದ ಜನಪರ ಕಾರ್ಯಗಳಿಂದ ಜನ ಸಂತೃಪ್ತರಾಗಿದ್ದು ಮುಂದಿನ ಅವಧಿಗೂ ಅಧಿಕಾರ ಕೊಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು.



ಲೋಕಾಯುಕ್ತ ದಾಳಿಗೊಳಗಾದ ಚನ್ನಗಿರಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಬಿ.ಎಸ್. ಯಡಿಯೂರಪ್ಪನವರ ಆಪ್ತ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯನೂ ನನ್ನ ಆಪ್ತ, ಎಲ್ಲರೂ ನನ್ನ ಆಪ್ತರೇ, ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು.



ಶಾಸಕ ಮಾಡಾಳ ಪುತ್ರನ ಮನೆಯಲ್ಲಿ ಆರು ಕೋಟಿ ರೂಪಾಯಿ ಪತ್ತೆಯಾದ ಕುರಿತು ಲೋಕಾಯುಕ್ತ ಅಧಿಕಾರಿಗಳು ಸಮಗ್ರ ತನಿಖೆ ಮಾಡುತ್ತಿದ್ದಾರೆ, ತಪಿತಸ್ತರಿಗೆ ಶಿಕ್ಷೆಯಾಗಲಿದೆ. ಲೋಕಾಯುಕ್ತರು ಕಾನೂನಿನ ಪ್ರಕಾರ ಲೋಕಾಯುಕ್ತ ಕ್ರಮ ಕೈಗೊಳ್ಳುತಾರೆ. ಸಿದ್ದರಾಮಯ್ಯ, ಕಾಂಗ್ರೆಸ್ಸಿಗರು ಇಲ್ಲವೇ ನಾನು ತೀರ್ಮಾನ ಮಾಡಲು ಆಗುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ