LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬಿಜೆಪಿ, ಆರ್‌ಎಸ್‌ಎಸ್‌ ಜೊತೆ ಯಾವುದೇ ಸಂಬಂಧವಿಲ್ಲ : ಅಣ್ಣಾ ಹಜಾರೆ

ಮುಂಬಯಿ, ನ. 11: ದೇಶಾದ್ಯಂತ ಸಂಚಲನ ಮೂಡಿಸಿದ್ದ 2011-12ರ ಭ್ರಷ್ಟಾಚಾರ ವಿರೋಧಿ ಹೋರಾಟದ ಹಿಂದೆ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ರಹಸ್ಯ ಬೆಂಬಲವಿತ್ತು ಎಂಬ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಪವನ್ನು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಳ್ಳಿಹಾಕಿದ್ದಾರೆ. ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯೊಂದಿಗೆ ತಮಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸೋನಿಯಾ ಗಾಂಧಿ ಅವರ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಆತ್ಮಕಥನದಲ್ಲಿ ಅಣ್ಣಾ ಹಜಾರೆ ನೇತೃತ್ವದ ‘ಇಂಡಿಯಾ ಅಗೇನ್ಸ್ಟ್ ಕರಪ್ಷನ್’ ಚಳವಳಿಯ ಕುರಿತು ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ಚಳವಳಿಗೆ ಪರೋಕ್ಷವಾಗಿ ಬೆಂಬಲ ನೀಡಿದ್ದವು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಚಳವಳಿಯಲ್ಲಿ ಭಾಗವಹಿಸಿದ್ದ ಕೆಲವು ಪ್ರಮುಖರೇ ನಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ಹೋರಾಟವನ್ನು ಸಂಘಟಿಸಿ, ರಹಸ್ಯವಾಗಿ ಬೆಂಬಲಿಸಿದ್ದವು ಎಂದು ಹೇಳಿಕೊಂಡಿರುವುದನ್ನು ಸೋನಿಯಾ ತಮ್ಮ ಆತ್ಮಕಥನದಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಆರೋಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಣ್ಣಾ ಹಜಾರೆ, ‘‘ಇದು ಸಂಪೂರ್ಣ ತಪ್ಪು. ನನಗೆ ಬಿಜೆಪಿ ಅಥವಾ ಆರ್‌ಎಸ್‌ಎಸ್‌ ಜೊತೆ ಯಾವುದೇ ಸಂಬಂಧವಿಲ್ಲ. ಅವರ ಯಾವುದೇ ಕಾರ್ಯಕ್ರಮಗಳಲ್ಲೂ ನಾನು ಭಾಗವಹಿಸಿಲ್ಲ. ನನಗೆ ದೇಶವೇ ಮೊದಲ ಆದ್ಯತೆ. ನನ್ನ ಹೋರಾಟಗಳು ಸದಾ ಸಮಾಜ ಮತ್ತು ದೇಶದ ಹಿತಕ್ಕಾಗಿ ನಡೆದಿವೆಯೇ ಹೊರತು ಯಾವುದೇ ರಾಜಕೀಯ ಪಕ್ಷದ ಪರವಾಗಿ ಅಲ್ಲ’’ ಎಂದು ಹೇಳಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಸೋಲಿಗೆ ತಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟವೇ ಕಾರಣ ಎಂಬ ಅಭಿಪ್ರಾಯವನ್ನೂ ಅವರು ಪ್ರಶ್ನಿಸಿದ್ದಾರೆ.

‘‘ನನ್ನ ಹೋರಾಟದಿಂದಲೇ 2014ರ ಚುನಾವಣೆಯಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಸೋತಿತು ಎಂದು ಹೇಳಲು ಆಧಾರವೇನು? ಚುನಾವಣೆಯ ಸೋಲು-ಗೆಲುವಿಗೆ ಅನೇಕ ಕಾರಣಗಳಿರುತ್ತವೆ. ಅದಕ್ಕೆ ನನ್ನನ್ನು ಹೊಣೆಗಾರನನ್ನಾಗಿ ಮಾಡುವುದು ಸರಿಯಲ್ಲ’’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಪರಸ್ಪರ ಭೇಟಿಯೇ ಆಗಿಲ್ಲ’

ಸೋನಿಯಾ ಗಾಂಧಿ ಮತ್ತು ತಾವು ಈವರೆಗೂ ಪರಸ್ಪರ ಭೇಟಿಯಾಗಿಲ್ಲ ಎಂದು ತಿಳಿಸಿರುವ ಹಜಾರೆ, ತಮ್ಮನ್ನು ವೈಯಕ್ತಿಕವಾಗಿ ತಿಳಿಯದವರು ಇಂತಹ ಆರೋಪ ಮಾಡುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.

‘‘ಅವರು ನನ್ನನ್ನು ನೋಡಿಲ್ಲ, ನಾನೂ ಅವರನ್ನು ನೋಡಿಲ್ಲ. ಪರಸ್ಪರ ಭೇಟಿಯೇ ಆಗದಿರುವಾಗ ನನ್ನ ಬಗ್ಗೆ ಇಂತಹ ಹೇಳಿಕೆ ನೀಡುವುದು ಎಷ್ಟು ಸೂಕ್ತ? ಸಾರ್ವಜನಿಕ ಜೀವನದಲ್ಲಿರುವ ಜವಾಬ್ದಾರಿಯುತ ವ್ಯಕ್ತಿಗಳು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಆಧಾರವಿಲ್ಲದೆ ಆರೋಪ ಮಾಡುವುದರಿಂದ ಅವರದ್ದೇ ವರ್ಚಸ್ಸಿಗೆ ಧಕ್ಕೆಯಾಗುತ್ತದೆ’’ ಎಂದು ಹೇಳಿದ್ದಾರೆ.

2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ನಡೆದ ಜನಲೋಕಪಾಲ ಮಸೂದೆ ಜಾರಿಗೊಳಿಸುವ ಹೋರಾಟ ದೇಶಾದ್ಯಂತ ವ್ಯಾಪಕ ಬೆಂಬಲ ಪಡೆದಿತ್ತು. ಭ್ರಷ್ಟಾಚಾರದ ವಿರುದ್ಧ ನಡೆದ ಈ ಚಳವಳಿ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ರಾಜಕೀಯವಾಗಿ ದೊಡ್ಡ ಸವಾಲಾಗಿ ಪರಿಣಮಿಸಿತ್ತು.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಸೋಲು ಅನುಭವಿಸಿ, ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದಿತ್ತು. ಇದೀಗ ಸೋನಿಯಾ ಗಾಂಧಿ ಅವರ ಆತ್ಮಕಥನದಲ್ಲಿನ ಉಲ್ಲೇಖದಿಂದಾಗಿ ಅಂದಿನ ಭ್ರಷ್ಟಾಚಾರ ವಿರೋಧಿ ಚಳವಳಿಯ ರಾಜಕೀಯ ಹಿನ್ನೆಲೆಯ ಕುರಿತು ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ: ಬೆಳಗಾವಿ ಅಧಿವೇಶನದಲ್ಲಿ ಭರವಸೆ ಈಡೇರಿಸಲು ಗಡುವುಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್