LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರ

ಗುವಾಹಟಿ, ಮೇ 2 : ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ಈ ಬಾರಿ ಎಲ್ಲ ರಾಜ್ಯಗಳಲ್ಲೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದರು.

ಗುವಾಹಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಚುನಾವಣೋತ್ತರ ಸಮೀಕ್ಷೆಗಳ ಕುರಿತು ಕೇಳಿದಾಗ, ಈ ಸಮೀಕ್ಷೆಗಳಲ್ಲಿ ಬಳಸುವ ಮಾದರಿ ಪ್ರಮಾಣ ತುಂಬಾ ಸಣ್ಣದಾಗಿರುತ್ತದೆ. ಹೀಗಾಗಿ ನಮ್ಮ ಲೆಕ್ಕಾಚಾರ ಬೇರೆ ಇದೆ. ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಿಲ್ಲ. ನಾನು ಇಲ್ಲಿಗೆ ಬಂದಿರುವುದು ನಮ್ಮ ಶಾಸಕರನ್ನು ರಕ್ಷಿಸಿ, ಮಾರ್ಗದರ್ಶನ ನೀಡಿ, ಶಕ್ತಿ ತುಂಬಲು ಎಂದು ಹೇಳಿದರು.

ಅಸ್ಸಾಂ ಚುನಾವಣೆ ಕುರಿತು ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅಸ್ಸಾಂನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ನಾಯಕರ ಮೇಲೆ ನಂಬಿಕೆ ಇದೆ. ಅವರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಮತದಾರರ ಮೇಲೆ ವಿಶ್ವಾಸವಿದೆ. ಅವರಿಗೆ ಬದಲಾವಣೆ ಬೇಕಾಗಿದೆ. ಆ ಬದಲಾವಣೆ ಖಚಿತವಾಗಿ ಸಿಗಲಿದೆ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.

ತಮಿಳುನಾಡು ಚುನಾವಣೆಯ ಬಗ್ಗೆ ಕೇಳಿದಾಗ, ದೇಶಾದ್ಯಂತ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಪಶ್ಚಿಮ ಬಂಗಾಳದ ಕುರಿತು ಕೇಳಿದಾಗಲೂ, ಪ್ರತಿಯೊಂದು ರಾಜ್ಯದಲ್ಲೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಪುನರುಚ್ಚರಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ