ಹಾವೇರಿ, ನ. 27: ರಾಜ್ಯದ ಸರ್ಕಾರಿ ಶಾಲೆಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸ್ಪಷ್ಟಪಡಿಸಿದ್ದಾರೆ.
ಕಾಗಿನೆಲೆಯಲ್ಲಿ ನಡೆಯಲಿರುವ ಕನಕ ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಮಧ್ಯಾಹ್ನ ಹಾವೇರಿಗೆ ಆಗಮಿಸಿದ ಅವರು, ವಿವಿಧ ಸಂಘಟನೆಗಳ ಮುಖಂಡರಿಂದ ಮನವಿ ಸ್ವೀಕರಿಸಿ ಮಾತನಾಡಿದರು.
ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲು ಸರ್ಕಾರ ತೀರ್ಮಾನಿಸಿರುವುದು ಸರಿಯಲ್ಲ. ಈ ನಿರ್ಧಾರದಿಂದ ಸರ್ಕಾರಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗಲಿದ್ದು, ಸರ್ಕಾರ ತನ್ನ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಸರ್ಕಾರಿ ಶಾಲೆಗಳನ್ನು ಖಾಸಗೀಕರಣ ಮಾಡಲು ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.