ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲಿ ಯಶಸ್ವಿನಿ ಯೋಜನೆ ನ. ೧ ರಿಂದ ಅಧಿಕೃತ ಜಾರಿ 

ಬೆಂಗಳೂರು : 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರುಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.

ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಕುಟುಂಬಗಳಿಗೆ 1000 ರೂ. ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ಪಾವತಿಸಿ, ನೊಂದಾಯಿಸಬಹುದು.

ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.