LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಪಘಾತದಲ್ಲಿ ಮಿದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗಾಂಗ ದಾನ

ಮಣಿಪಾಲ, ೨೮:  ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಲಾಗಿದ್ದು, ಸಾವಿನಲ್ಲೂ ಸಾರ್ಥಕ್ಯ ಮೆರೆದಿದ್ದಾರೆ.



ಶಿವಮೊಗ್ಗ ಜಿಲ್ಲೆಯ 44 ವರ್ಷದ ಲಲಿತಮ್ಮ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರನ್ನು ರಕ್ಷಿಸಲು ಎಲ್ಲ ರೀತಿಯಲ್ಲೂ ಪ್ರಯತ್ನಿಸಿದರೂ ಚೇತರಿಸಿಕೊಳ್ಳುವ ಲಕ್ಷಣ ಕಂಡುಬರಲಿಲ್ಲ. "ಮಾನವ ಅಂಗಾಂಗ ಕಸಿ ಕಾಯ್ದೆ 1994" ರನ್ವಯ ಲಲಿತಮ್ಮ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.



ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಒಪ್ಪಿಗೆ ವ್ಯಕ್ತಪಡಿಸಿದರು. "ಜೀವಸಾರ್ಥಕತೆ ಪ್ರೋಟೋಕಾಲ್‌ ಮತ್ತು ನಿರ್ಧಾರ" ಗಳ ಪ್ರಕಾರ, ದಾನ ಮಾಡಿದ ಶ್ವಾಸಕೋಶಗಳನ್ನು ಹೈದರಾಬಾದ ಕಿಮ್ಸ, ಯಕೃತ್‌ ಅನ್ನು ಬೆಂಗಳೂರಿನ ಸ್ಪರ್ಶ, ಒಂದು ಮೂತ್ರಪಿಂಡವನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಕಳುಹಿಸಲಾಯಿತು. ಒಂದು ಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.



ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಠ ಕೆಲಸವಾಗಿದ್ದು, ಅತ್ಯಂತ ಮಹತ್ವ ಪಡೆದಿದೆ ಎಂದು ಅಂಗಾಂಗ ದಾನ ಮಾಡಲು ನಿರ್ಧರಿಸಿದ ಲಲಿತಮ್ಮ ಅವರ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ