ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಪತ್ತೆಯಾಗಿದ್ದ ರೌಡಿಗಳು ಬಿಜೆಪಿ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತ್ಯಕ್ಷವಾದದ್ದಕ್ಕೆ ಆಕ್ರೋಷ

ಬೆಂಗಳೂರು: ನಾಪತ್ತೆಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ ನಿನ್ನೆ ನಡೆದ ಬಿಜೆಪಿ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತ್ಯಕ್ಷವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರ ಪಕ್ಕದಲ್ಲಿಯೇ ಕುಳಿತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ನಾಪತ್ತೆಯಾಗಿದ್ದ 9 ರೌಡಿ ಶೀಟರ್ ಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಡಾ.ಶರಣಪ್ಪ ಮಾಹಿತಿ ನೀಡಿದ್ದು, ಬೆಂಗಳೂರಿನ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಾಪತ್ತೆಯಾಗಿದ್ದ ಸೈಲೆಂಟ್ ಸುನೀಲ, ಸೈಕಲ್ ರವಿ, ಮುಲಾಮ, ರೋಹಿತ ಸೇರಿದಂತೆ 9 ರೌಡಿಗಳನ್ನು ವಶಕ್ಕೆ ಪಡೆದು ವಾರ್ನಿಂಗ್ ಕೊಟ್ಟಿದ್ದೇವೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಸೈಲೆಂಟ್ ಸುನೀಲ ಭಾಗಿಯಾಗಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಯಾರ ಯಾರ ಮೇಲೆ ಕೇಸ್ ಗಳು ಇವೆಯೋ ಅವರ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.