LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಫೆಲೆಸ್ತೀನ್‌ ; ಎರಡು ರಾಷ್ಟ್ರಗಳ ಪರಿಹಾರಕ್ಕೆ ಭಾರತದ ಬೆಂಬಲ: ಜೈಶಂಕರ್‌

ಹೊಸದಿಲ್ಲಿ, ಮೇ 14 : ಬ್ರಿಕ್ಸ್‌ ವಿದೇಶಾಂಗ ಸಚಿವರ ಸಭೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದ ಬಗ್ಗೆ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಫೆಲೆಸ್ತೀನ್‌ ಸಮಸ್ಯೆಗೆ ಸಂಬಂಧಿಸಿದಂತೆ ಭಾರತವು ಎರಡು ರಾಷ್ಟ್ರಗಳ ಪರಿಹಾರಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.

ಫೆಬ್ರವರಿ 28ರಿಂದ ಗಲ್ಫ್‌ ಪ್ರದೇಶದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಉಲ್ಲೇಖಿಸಿದ ಜೈಶಂಕರ್‌, ಹಾರ್ಮುಝ್‌ ಜಲಸಂಧಿ ಮುಚ್ಚುವಿಕೆಯ ಭೀತಿಯಿಂದ ಸಮುದ್ರ ಸಂಚಾರ ಹಾಗೂ ಇಂಧನ ಮೂಲಸೌಕರ್ಯಗಳಿಗೆ ಅಪಾಯ ಎದುರಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ವಿಶೇಷ ಗಮನಕ್ಕೆ ಅರ್ಹವಾಗಿದ್ದು, ನಿರಂತರ ಉದ್ವಿಗ್ನತೆ, ಸಮುದ್ರ ಮಾರ್ಗಗಳ ಮೇಲಿನ ಅಪಾಯ ಹಾಗೂ ಇಂಧನ ಮೂಲಸೌಕರ್ಯಗಳಿಗೆ ಎದುರಾಗಿರುವ ಅಡ್ಡಿಗಳು ಜಾಗತಿಕ ಭದ್ರತಾ ಪರಿಸ್ಥಿತಿಯ ದುರ್ಬಲತೆಯನ್ನು ತೋರಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಲೆಬನಾನ್‌, ಸಿರಿಯಾ, ಸುಡಾನ್‌, ಯೆಮೆನ್‌ ಮತ್ತು ಲಿಬಿಯಾ ಸೇರಿದಂತೆ ಪಶ್ಚಿಮ ಏಷ್ಯಾದ ಇತರ ಭಾಗಗಳಲ್ಲಿಯೂ ಅಸ್ಥಿರತೆ ಹೆಚ್ಚುತ್ತಿರುವ ಬಗ್ಗೆ ಸಭೆಯಲ್ಲಿ ಜೈಶಂಕರ್‌ ಗಮನ ಸೆಳೆದಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ