LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನನ್ನ ವಿರುದ್ಧ ಕೇಂದ್ರ ಸಚಿವರಿಂದ ರಾಜಕೀಯ ಸಂಚು: ಪ್ರಿಯಾಂಕ್ ಖರ್ಗೆ

ಬೆಂಗಳೂರು, ನ. 2: ಕೆಪಿಎಸ್‌ಸಿ ನೇಮಕಾತಿ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸಚಿವರು ಹಾಗೂ ತಮ್ಮನ್ನು ರಾಜಕೀಯವಾಗಿ ಸಿಲುಕಿಸಲು ಕೇಂದ್ರ ಸಚಿವರೊಬ್ಬರು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದೆಹಲಿಯ ಅಧಿಕಾರ ವಲಯದಲ್ಲಿ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಕೆಪಿಎಸ್‌ಸಿ ಪ್ರಕರಣದ ಆರೋಪಿಗಳ ಮೇಲೆ ಒತ್ತಡ ಹೇರಿ ತಮ್ಮ ಹಾಗೂ ಸಂಪುಟ ಸಹೋದ್ಯೋಗಿಗಳ ವಿರುದ್ಧ ಹೇಳಿಕೆ ಪಡೆಯಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ.

ಆರ್‌ಎಸ್‌ಎಸ್‌ನ ಗ್ರೂಪ್–ಡಿ ಹುದ್ದೆಗೆ ಹೊಸದಾಗಿ ನೇಮಕಗೊಂಡವರೊಬ್ಬರು ಈ ಸಂಚಿನ ಹಿಂದಿದ್ದಾರೆ ಎಂದು ವ್ಯಂಗ್ಯವಾಡಿರುವ ಪ್ರಿಯಾಂಕ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡಿದ್ದಾರೆ.

ತಮ್ಮನ್ನು ನೇರವಾಗಿ ರಾಜಕೀಯವಾಗಿ ಎದುರಿಸುವ ಧೈರ್ಯವಿಲ್ಲದ ಸಚಿವರು, ಹತಾಶೆಯಿಂದ ತಮ್ಮದೇ ಮೈತ್ರಿಕೂಟದ ಪಾಲುದಾರರನ್ನೂ ಈ ಪ್ರಯತ್ನದಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಕೆಪಿಎಸ್‌ಸಿ ತನಿಖೆಯನ್ನು ರಾಜಕೀಯ ಪ್ರತೀಕಾರಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಕೇಂದ್ರದ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳ ನಾಯಕರ ವಿರುದ್ಧ ಅಸ್ತ್ರವಾಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶ: 8 ಕಾರ್ಮಿಕರ ದುರ್ಮರಣಜಾತಿ ಬಲದಿಂದಲೇ ಕುಮಾರಸ್ವಾಮಿ ಸಿಎಂ ಆಗಿದ್ದು: ಪ್ರಿಯಾಂಕ್ ಖರ್ಗೆ ವಾಗ್ದಾಳಿಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನುಎಪಿಎಂಸಿಗಳಲ್ಲಿ ಕಮಿಷನ್ ಹಾವಳಿ ತಡೆಗೆ ಆಗ್ರಹಿಸಿ ರೈತರ ಅನಿರ್ದಿಷ್ಟಾವಧಿ ಧರಣಿಸಕ್ಕರೆ ಮಾರಾಟ ದರ ಆಧರಿಸಿ ಕಬ್ಬಿನ ಬೆಲೆ ನಿಗದಿ ಅಸಾಧ್ಯ: ಸತೀಶ ಜಾರಕಿಹೊಳಿನನ್ನ ವಿರುದ್ಧ ಕೇಂದ್ರ ಸಚಿವರಿಂದ ರಾಜಕೀಯ ಸಂಚು: ಪ್ರಿಯಾಂಕ್ ಖರ್ಗೆಆಯೋಗದ ಪರ ಬಿಜೆಪಿ ಬ್ಯಾಟಿಂಗ್; ಹೆಸರು ತೆಗೆದುಹಾಕುವುದು ಕಳ್ಳತನವಲ್ಲಎಸ್‌ಐಆರ್ ಪಟ್ಟಿ ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯಬೆಂಗಳೂರು–ಚೆನ್ನೈ ಬುಲೆಟ್ ರೈಲು ಘೋಷಣೆ!ರಾಮಮಂದಿರ ದೇಣಿಗೆ ಕಳ್ಳತನ : ವಿಚಾರಣೆ ಸ್ಥಳೀಯ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ