ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಗ್ರೀವಾಜ್ಞೆ ಮೂಲಕ ಎಸ್ ಸಿ, ಎಸ್ ಟಿ ಮೀಸಲಾತಿ ಜಾರಿಗೆ ತಯಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ತಯಾರಿ ನಡೆಸಿದೆ.

ಅಕ್ಟೋಬರ 20ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗುತ್ತಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿಯೇ ಅಕ್ಟೋಬರ್ 20ರಂದು ನಡೆಯಲಿರುವಂತ ಸಚಿವ ಸಂಪುಟ ಸಭೆ ಮಹತ್ವವನ್ನು ಪಡೆದಿದೆ. ಅದು ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಸಂಬಂಧದ ಕಡತಕ್ಕೆ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರೋದಕ್ಕೆ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದ್ದು ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿಯನ್ನು ಹೆಚ್ಚಳದ ಆದೇಶ ಹೊರ ಬೀಳಲಿದೆ.

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.