LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

5ಜಿ ಸೇವೆಗೆ ಇಂದು ಪ್ರಧಾನಿ ಚಾಲನೆ

ನವದೆಹಲಿ: ಇಂದು ಭಾರತದಲ್ಲಿ ಬಹುನಿರೀಕ್ಷಿತ 5 ಜಿ ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.



ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ 1, 2022 ರಂದು ಭಾರತದಲ್ಲಿ 5 ಜಿ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಅಕ್ಟೋಬರ್ 1 ರಿಂದ 4, 2022 ರವರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆಯಲಿರುವ 6 ನೇ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ರ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.



ಆಯ್ದ ನಗರಗಳಲ್ಲಿ ಉದ್ಘಾಟಿಸಲಿರುವ ಪ್ರಧಾನಿ ಮೋದಿ, 5ಜಿ ಮುಂದಿನ ಒಂದೆರಡು ವರ್ಷಗಳಲ್ಲಿ ಹಂತಹಂತವಾಗಿ ಇಡೀ ದೇಶವನ್ನು ವ್ಯಾಪಿಸಲಿದೆ.



ಪ್ರಧಾನ ಮಂತ್ರಿಗಳು ಮೊದಲು 5ಜಿ ಸೇವೆಗಳನ್ನು ಪ್ರಾರಂಭಿಸುವ ನಗರಗಳನ್ನು ಸರ್ಕಾರ ನಿರ್ದಿಷ್ಟಪಡಿಸಿಲ್ಲವಾದರೂ, ಟೆಲಿಕಾಂ ಆಪರೇಟರಗಳು ತಮ್ಮ ನೆಟ್‌ವರ್ಕ್ ನಲ್ಲಿ 5 ಜಿ ಸೇವೆಗಳನ್ನು ಹೇಗೆ ಪ್ರಾರಂಭಿಸಲು ಯೋಜಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.



88,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಬಿಡ್ ಮಾಡುವ ಈ ವರ್ಷದ 5ಜಿ ಸ್ಪೆಕ್ಟ್ರಂ ಹರಾಜಿನಲ್ಲಿ ಅಗ್ರ ವ್ಯಯ ಮಾಡಿದ ರಿಲಯನ್ಸ ಜಿಯೋ, ಈ ವರ್ಷದ ದೀಪಾವಳಿಯ ವೇಳೆಗೆ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತಾದಂತಹ ಮೆಟ್ರೋ ನಗರಗಳಲ್ಲಿ ದೀಪಾವಳಿಯ ವೇಳೆಗೆ ತನ್ನ 5 ಜಿ ಸೇವೆಗಳನ್ನು ಪ್ರಾರಂಭಿಸುವುದಾಗಿ ತಿಳಿಸಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ