ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಿ. ೧೨ ಹಾಗು ೧೯ ರಂದು ರಾಜ್ಯಕ್ಕೆ ಪ್ರಧಾನಿ ಭೇಟಿ

ಬೆಂಗಳೂರು: ಈ ತಿಂಗಳ ೧೨ ಹಾಗು ೧೯ ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ೧೨ ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಬೊಮ್ಮಾಯಿ ಮಾತನಾಡಿ, ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ ೨೮ ರಾಜ್ಯಗಳು ಹಾಗೂ ೮ ಕೇಂದ್ರೀಯ ಪ್ರಾಂತ್ಯದಿಂದ ಜನ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ನಂತರ ಜನವರಿ ೧೯ಕ್ಕೆ ನಾರಾಯಣಪುರಕ್ಕೆ ಮೋದಿ ಆಗಮಿಸಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.