ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಂಡಲಗಾ ಜೈಲಿನಲ್ಲಿ ವಿಚಾರಣಾ ಕೈದಿಗಳಿಂದ ಕೈದಿ ಮೇಲೆ ಹಲ್ಲೆ

ಬೆಳಗಾವಿ: ಹಳೆ‌ ದ್ವೇಷದ ಕಾರಣ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ನಿತೇಶಕುಮಾರನನ್ನು ಬಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ‌ ದಡ್ಡಿ, ಬಸವಣ್ಣಿ ಸಿದ್ದಪ್ಪ ನಾಯಿಕ, ಸವೆನಾ ಸಿದ್ದಪ್ಪ ದಡ್ಡಿ ಹಾಗೂ ಪ್ರಧಾನಿ ಶೇಖರ ವಾಘಮೋಡೆ ಎಂಬವರು ಹಲ್ಲೆ ಮಾಡಿದ್ದಾರೆ.

ಆರೋಪಿಗಳ ಸಂಬಂಧಿಕನ ಮೇಲೆ ಹಲ್ಲೆ ಮಾಡಿದ್ದ ಎಂಬ ಕಾರಣಕ್ಕೆ ಎಲ್ಲರೂ ಸೇರಿ ಈತನ ಮೇಲೆ ಹಲ್ಲೆ‌ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.