ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

10 ವರ್ಷಗಳಲ್ಲಿ ಮೋದಿ ಸರಕಾರ ಮಾಡಿದ 130 ಲಕ್ಷ ಕೋಟಿ ರೂ. ಸಾಲದ ಹಣ ಎಲ್ಲಿ ಹೋಯ್ತು? : ಪ್ರಿಯಾಂಕ ಖರ್ಗೆ ಪ್ರಶ್ನೆ








ಬೆಂಗಳೂರು, 19 : 1947ರಿಂದ 2014ರವರೆಗೆ ಭಾರತದ ಸಾಲ 54 ಲಕ್ಷ ಕೋಟಿ ರೂ. ಇತ್ತು. 2014ರಿಂದ 2025ರವರೆಗೆ 200.16 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ರೂ. ಸಾಲ ಮಾಡಿರುವ ಕೇಂದ್ರ ಬಿಜೆಪಿ ಸರಕಾರವು ಪಾವತಿಸುತ್ತಿರುವ ಬಡ್ಡಿಯೇ 12.76 ಲಕ್ಷ ಕೋಟಿ ರೂ. ಆಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪೋಸ್ಟ ಹಂಚಿಕೊಂಡಿರುವ ಅವರು, ಸ್ವಾತಂತ್ರ್ಯದ ನಂತರ 67 ವರ್ಷಗಳಲ್ಲಿ ಶೂನ್ಯದಿಂದ ದೇಶವನ್ನು ಕಟ್ಟಲಾಗಿದ್ದು ಬೃಹತ್ ಡ್ಯಾಮಗಳನ್ನು, ಬೃಹತ್ ಕೈಗಾರಿಕೆಗಳನ್ನು, ವಿಸ್ತಾರದ ರೈಲ್ವೆ ವ್ಯವಸ್ಥೆಯನ್ನು, ಏಮ್ಸನಂತಹ ಸುಸಜ್ಜಿತ ಆಸ್ಪತ್ರೆಗಳನ್ನು, ಶಿಕ್ಷಣ ಸಂಸ್ಥೆಗಳನ್ನು ಕಟ್ಟಲಾಗಿದೆ. ಬಾಹ್ಯಾಕಾಶ ಸಾಧನೆಗಳನ್ನು ಮಾಡಲಾಗಿದೆ, ಮೂರು ಯುದ್ಧಗಳನ್ನು ಎದುರಿಸಲಾಗಿದೆ. ಜಗತ್ತಿನ 4ನೇ ಶಕ್ತಿಶಾಲಿ ಸೈನ್ಯವನ್ನು ಕಟ್ಟಲಾಗಿದೆ, ರಸ್ತೆ, ನೀರು, ವಿದ್ಯುತ್ ನಂತಹ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ, ಅಣು ಪರೀಕ್ಷೆ ನಡೆಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

67 ವರ್ಷಗಳಲ್ಲಿನ ಇಷ್ಟೆಲ್ಲಾ ಸಾಧನೆಗಳ ಹೊರತಾಗಿಯೂ ಭಾರತದ ಸಾಲ 54 ಲಕ್ಷ ಕೋಟಿ ಮಾತ್ರವಿತ್ತು. ಆದರೆ ಕೇವಲ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚು ಸಾಲ ಮಾಡಿದ ಮೋದಿ ಸರಕಾರ ದೇಶಕ್ಕೆ ಕೊಟ್ಟಿದ್ದೇನು? ಈ ಸಾಲದ ಹಣ ಎಲ್ಲಿ ಹೋಯ್ತು? ಎಲ್ಲಿ ವಿನಿಯೋಗವಾಯ್ತು? ಎಂದು ಅವರು ಖರ್ಗೆ ಪ್ರಶ್ನಿಸಿದ್ದಾರೆ.

ತೆರಿಗೆ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಇಷ್ಟು ಮೊತ್ತದ ಸಾಲ ಮಾಡಿದ್ದೇಕೆ? ಯಾರ ಜೇಬು ತುಂಬಿಸುವುದಕ್ಕೆ? ಬಿಜೆಪಿ ಈ ಬಗ್ಗೆ ಮಾತನಾಡುವುದೇ? ಪ್ರಧಾನಿ ಕೇವಲ ಒಂದೇ ಒಂದಾದರೂ ಪತ್ರಿಕಾಗೋಷ್ಠಿ ನಡೆಸಿ ಈ ಬೃಹತ್ ಸಾಲದ ಕಾರಣವನ್ನು ತಿಳಿಸುವರೇ? ಎಂದಿದ್ದಾರೆ.






WhatsApp

Don't Miss Out! Join Our WhatsApp Group!

Get latest news updates delivered straight to your WhatsApp.