LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಅಥಣಿ ಲಾಡ್ಜನಲ್ಲಿ ವೇಶ್ಯಾವಾಟಿಕೆ ಆರೋಪ: ಮಹಿಳೆ ರಕ್ಷಣೆ, ಓರ್ವ ಬಂಧನ

ಅಥಣಿ, ಅ. 5 : (ಸಮದರ್ಶಿ ಸುದ್ದಿ) - ಅಥಣಿ-ರಾಯದರಹಟ್ಟಿ ರಸ್ತೆಯಲ್ಲಿರುವ ಶಿವಶಕ್ತಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಥಣಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಮಹಿಳೆಯೊಬ್ಬರನ್ನು ರಕ್ಷಿಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಲಾಡ್ಜ್ ವ್ಯವಸ್ಥಾಪಕ ಸೇರಿದಂತೆ ಮತ್ತಿಬ್ಬರ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.

ಅಥಣಿ ವೃತ್ತ ನಿರೀಕ್ಷಕ ಸಂತೋಷ ಡಿ. ಹಳ್ಳೂರ ಅವರಿಗೆ ಅಕ್ಟೋಬರ್ 3ರಂದು ಲಾಡ್ಜ್‌ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ಪೊಲೀಸ್ ತಂಡ ಶಿವಶಕ್ತಿ ಲಾಡ್ಜ್ ಮೇಲೆ ದಾಳಿ ನಡೆಸಿದೆ.

ದಾಳಿ ವೇಳೆ ವೇಶ್ಯಾವಾಟಿಕೆಗೆ ಬಳಸಲಾಗುತ್ತಿದೆ ಎನ್ನಲಾದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮಲ್ಲಪ್ಪ ದಿಲೀಪ ಕಾಂಬಳೆ ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಅಥಣಿಯ ಶಿವಶಕ್ತಿ ಲಾಡ್ಜ್ ವ್ಯವಸ್ಥಾಪಕ ರಾಹುಲ್ ಮಡ್ಡಿ ಹಾಗೂ ಗುಂಡೇವಾಡಿಯ ಗಣೇಶ ಸಂಕಪಾಳ ಅವರು ಮಹಿಳೆಯನ್ನು ಲಾಡ್ಜ್‌ನಲ್ಲಿ ಇರಿಸಿ ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಇವರ ಪಾತ್ರದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಎಸ್ಪಿ ಆರ್.ಬಿ. ಬಸರ್ಗಿ ಹಾಗೂ ಡಿವೈಎಸ್ಪಿ ಪ್ರಶಾಂತ ಜಿ. ಮುನ್ನೊಳ್ಳಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ವೃತ್ತ ನಿರೀಕ್ಷಕ ಸಂತೋಷ ಹಳ್ಳೂರ ನೇತೃತ್ವದ ತಂಡದಲ್ಲಿ ಮುಖ್ಯಪೇದೆ ಬಿ.ಆರ್. ಪಾಟೀಲ, ಪೊಲೀಸ್ ಸಿಬ್ಬಂದಿ ವೈ.ಎಂ. ಮೇಟಿ, ಜಿ.ಪಿ. ರಾಠೋಡ, ಮಹಿಳಾ ಪೊಲೀಸ್ ಸಿಬ್ಬಂದಿ ಎಸ್.ಬಿ. ಖೋತ ಸೇರಿದಂತೆ ಪಂಚರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಭಾಗವಹಿಸಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಡಿಲು ಬಡಿದು ಎರಡು ಹಸು ಸಾವುಐಎಚ್‌ಆರ್‌ಸಿ ಬೆಳಗಾವಿ ಜಿಲ್ಲಾ ಮಂಡಳಿ ಅಧ್ಯಕ್ಷರಾಗಿ ಅಬ್ದುಲ್ ಅಜೀಜ ಶೇಖ ನೇಮಕಚುಳಕಿಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ-ಖೋಖೋ ಕ್ರೀಡಾಕೂಟಕ್ಕೆ ಚಾಲನೆಮೊಬೈಲ್ ಟವರ್ ಆಮಿಷ, ಫೇಸ್‌ಬುಕ್ ಲಿಂಕ್: ಅಥಣಿಯ ಇಬ್ಬರು ರೈತರಿಗೆ ₹4.04 ಲಕ್ಷ ವಂಚನೆಅಥಣಿ ಲಾಡ್ಜನಲ್ಲಿ ವೇಶ್ಯಾವಾಟಿಕೆ ಆರೋಪ: ಮಹಿಳೆ ರಕ್ಷಣೆ, ಓರ್ವ ಬಂಧನಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಜಗಳ: ಪತ್ನಿಯನ್ನು ಕುಡಗೋಲಿನಿಂದ ಕೊಚ್ಚಿ ಹತ್ಯೆಬಿಜೆಪಿ ಮುಖಂಡ ರವಿ ಪಾಟೀಲಗೆ ನಿರೀಕ್ಷಣಾ ಜಾಮೀನುಮೋದಿ-ಶಾ ಸೂಚನೆಯಂತೆ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದ್ರೋಹ: ಕಾಂಗ್ರೆಸ್ಮಹಿಳಾ ಪತ್ರಕರ್ತೆಯರ ಪೊಲೀಸರ ಲೈಂಗಿಕ ಕಿರುಕುಳ ; ಎಫ್‌ಐಆರ್‌ಗೆ ಒತ್ತಾಯಿಸಿದವರು ವಶಕ್ಕೆಇದು ಗುಜರಾತ್, ಯುಪಿ ಅಲ್ಲ; ಕಾನೂನು ಮುರಿದರೆ ಪರಿಣಾಮ ಎದುರಿಸಿ: ಪ್ರಿಯಾಂಕ್ ಖರ್ಗೆ