LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.



ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.



ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ,

ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕ‌ರ್, ವೆಂಕಯ್ಯ ನಾಯ್ಡು, ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕ‌ರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ಧನಕ‌ರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಸೋಲಿಸಿದ್ದರು.



ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ರೆಡ್ಡಿ 300 ಮತಗಳನ್ನು ಗಳಿಸಿದ್ದರು.



ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಆಳವಾದ ಬೇರುಗಳನ್ನು ಹೊಂದಿರುವ ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ 67 ವರ್ಷದ ರಾಧಾಕೃಷ್ಣನ್ ತಮಿಳುನಾಡಿನ ವಾಜಪೇಯಿ ಎಂದೇ ಖ್ಯಾತಿ ಗಳಿಸಿದ್ದಾರೆ.



ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್‌ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ