LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಮರಕ್ಕೂ ಸಿದ್ಧ ಸಂಧಾನಕ್ಕೂ ಸಿದ್ಧ : ಮುರುಘಾ ಶರಣರು 

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ .



ಇತ್ತ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ. ಇದರ ನಡುವೆ ಮುರುಘಾ ಶ್ರೀಗಳ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಚಿತ್ರದುರ್ಗದ ಮುರುಘಾ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುರುಘಾಶ್ರೀ ಅವರು, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.



ಈ ಸಲಹಾ ಸಮಿತಿ ಸಭೆಯಲ್ಲಿ ಭಕ್ತರು, ವಕೀಲರು, ವಿವಿಧ ಸಮಾಜಗಳ ಮುಖಂಡರು ಸೇರಿ ಹಲವರು ಭಾಗಿಯಾಗಿದ್ದರು. ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಮುಖಂಡರು, ನೇರವಾಗಿ ಮಾಜಿ ಶಾಸಕ ಬಸವರಾಜನ್ ಅವರ ವಿರುದ್ಧ ಷಡ್ಯಂತ್ರದ ಆರೋಪ ಮಾಡಿದ್ದಾರೆ.



ಆದರೆ ಮುರುಘಾಶ್ರೀ ಅವರು ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ತಪ್ಪು ಒಪ್ಪಿಕೊಂಡು ಬಂದರೆ ಕ್ಷಮಿಸಿ ಸಂಧಾನ ಮಾಡೋಣ. ಕಾನೂನು ಸಮರಕ್ಕೆ ಸೈ ಅಂದ್ರೆ ಕಾನೂನು ಮೂಲಕವೇ ಹೋರಾಟ ಮಾಡೋಣ ಎಂದು ಆಪ್ತರೆದುರು ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ