LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮಹಾರಾಷ್ಟ್ರದಿಂದ 6 ಟಿಎಂಸಿ ನೀರು ಬಿಡುಗಡೆಗೆ ರಾಜ್ಯ ಸರ್ಕಾರದ ಮನವಿ

ಬೆಳಗಾವಿ, ಎ.15 : ಬೆಳಗಾವಿ, ವಿಜಯಪುರ, ಬಾಗಲಕೋಟ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ತಲಾ‌ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿದೆ.



ಈ ಕುರಿತು ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್ ಅವರು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಎಪ್ರಿಲ್ 15 ರಂದು ಪತ್ರವನ್ನು ಬರೆದಿದ್ದಾರೆ.



ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ರಾಜ್ಯದ ಹಿಪ್ಪರಗಿ ಬ್ಯಾರೇಜಿನಲ್ಲಿ ನೀರಿನ ಸಂಗ್ರಹ ಕಡಿಮೆ ಇರುತ್ತದೆ.



ಆದ್ದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ರಾಜ್ಯದ ಕೊಯ್ನಾ ಜಲಾಶಯಗಳಿಂದ 3 ಟಿ‌ಎಂಸಿ ಹೆಚ್ಚುವರಿ ನೀರು ಕೃಷ್ಣಾ ನದಿಗೆ ಬಿಡುಗಡೆಗೊಳಿಸಬೇಕು. ಅದೇ ರೀತಿ ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಬಿಡುಗಡೆ ಮಾಡಬೇಕು.

ಹೀಗೆ ಮೇ ಮತ್ತು ಜೂನ್ ತಿಂಗಳಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಮಾನವೀಯತೆ ದೃಷ್ಟಿಯಿಂದ ಒಟ್ಟು ಆರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಕೇಶ್ ಸಿಂಗ್ ಪತ್ರದಲ್ಲಿ ವಿನಂತಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ