LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Districts Belagavi

ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನ

ಗೋಕಾಕ, 9: ಒಂದು ಕಾಲದ ಅತ್ಯಂತ ಪ್ರತಿಷ್ಠಿತ ಸರ್ಕಾರಿ ನ್ಯೂ ಸೆಕೆಂಡರಿ ಶಾಲೆಯ ನಿವೃತ್ತ ಶಿಕ್ಷಕ ಶ್ರೀ ಸುಲ್ತಾನ ಅಹಮ್ಮದ ಎ. ಕೊತವಾಲ್ ಅವರು ರವಿವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕೊತವಾಲ್ ಅವರು ತಮ್ಮ ಸರಳತೆ, ಶಿಸ್ತು ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಬೋಧನಾ ಶೈಲಿ ಇತರ ಶಿಕ್ಷಕರಿಗಿಂತ ವಿಭಿನ್ನವಾಗಿತ್ತು. ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವಂತೆ ವಿಶಿಷ್ಟ ರೀತಿಯಲ್ಲಿ ಬೋಧಿಸುತ್ತಿದ್ದರು. ಹೀಗಾಗಿ ಅವರು ವಿದ್ಯಾರ್ಥಿಗಳ ನೆಚ್ಚಿನ ಹಾಗೂ ಸ್ಮರಣೀಯ ಗುರುವಾಗಿದ್ದರು.

ಅವರಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಶಿಷ್ಯರಲ್ಲಿ ವೈದ್ಯರು, ಇಂಜಿನಿಯರ್‌ಗಳು, ಸರ್ಕಾರಿ ಅಧಿಕಾರಿಗಳು, ಪತ್ರಕರ್ತರು, ವಕೀಲರು ಹಾಗೂ ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರು ಇದ್ದಾರೆ. ದೇಶ-ವಿದೇಶಗಳಲ್ಲಿ ಅವರ ಶಿಷ್ಯರು ಉನ್ನತ ಸ್ಥಾನಗಳನ್ನು ಅಲಂಕರಿಸಿರುವುದು ಕೊತವಾಲ್ ಅವರ ಶಿಕ್ಷಣ ಸೇವೆಯ ಹೆಗ್ಗಳಿಕೆಗೆ ಸಾಕ್ಷಿಯಾಗಿದೆ.

ತಮ್ಮ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕೊತವಾಲ್ ಅವರು ಕೇವಲ ಶಿಕ್ಷಕರಾಗಿರದೆ, ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರು ಮತ್ತು ಪ್ರೇರಣಾಶಕ್ತಿಯಾಗಿದ್ದರು. ಅವರ ನಿಧನದಿಂದ ಗೋಕಾಕದ ಶಿಕ್ಷಣ ವಲಯ, ಸಹೋದ್ಯೋಗಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಅಪಾರ ಹಿತೈಷಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಅವರ ಅಂತ್ಯಕ್ರಿಯೆ ರವಿವಾರ ಸಂಜೆ 5.30 ಗಂಟೆಗೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕೊತವಾಲ್ ಅವರ ಶಿಷ್ಯರಲ್ಲಿ ಒಬ್ಬರಾದ ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ 90ರ ದಶಕದಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸಾಹೀರ ಧಾರವಾಡಕರ ಅವರು  ಕೊತವಾಲ್‌ ಗುರುಗಳ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅಗಲಿದ ಶಿಕ್ಷಕರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಗಣ್ಯರು, ಅವರ ಹಳೆಯ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ