LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆರೆಸ್ಸೆಸ್ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ: ರಾಹುಲ್ ಗಾಂಧಿ

Advertisement

ಹೊಸದಿಲ್ಲಿ, ಜುಲೈ 25: ಒಂದು ಕಾಲದಲ್ಲಿ ವಿಶ್ವದ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿದ್ದ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಆರೆಸ್ಸೆಸ್ ಕಳೆದ ಹಲವು ವರ್ಷಗಳಿಂದ ಕಬಳಿಸಿ ದುರ್ಬಲಗೊಳಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಹೆಮ್ಮೆಯಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಮರುನಿರ್ಮಿಸಲು ಕೇಂದ್ರ ಸರ್ಕಾರ ಕೇವಲ ಹೇಳಿಕೆಗಳನ್ನು ನೀಡುವುದರಿಂದ ಸಾಲದು. ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತರಲು ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯನ್ನು ವಿದ್ಯಾರ್ಥಿಗಳ ಹೋರಾಟದ "ವಿಜಯ" ಎಂದು ಬಣ್ಣಿಸಿದ ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೆಲ್ಲೆಟ್‌ ಗನ್‌ ಬಳಸಿರುವುದನ್ನು ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

"ಭಾರತದ ಭವಿಷ್ಯವಾಗಿರುವ ಯುವಜನರ ಮೇಲೆ ನಮ್ಮದೇ ಭದ್ರತಾ ಪಡೆಗಳು ಗುಂಡು ಹಾರಿಸುವುದನ್ನು ನಾವು ಒಪ್ಪುವುದಿಲ್ಲ. ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಚರ್ಚಿಸುತ್ತೇವೆ. ವಿದ್ಯಾರ್ಥಿಗಳ ವಿರುದ್ಧ ನಡೆದ ಕ್ರಮಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು" ಎಂದು ಅವರು ಒತ್ತಾಯಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜಾಪ್ರಭುತ್ವ ಮತ್ತು ವಿದ್ಯಾರ್ಥಿಗಳ ಗೆಲುವು : ವಿಪಕ್ಷಗಳ ಸ್ವಾಗತ'ವಂದೇ ಮಾತರಂ' ಅಪಮಾನಕ್ಕೆ ಶಿಕ್ಷೆ; ರಾಜ್ಯಸಭೆಯಲ್ಲಿ ವಿಧೇಯಕಧರ್ಮೇಂದ್ರ ಪ್ರಧಾನ ರಾಜೀನಾಮೆ ಬಳಿಕ ಜಂತರ್‌ ಮಂತರ್‌ನಲ್ಲಿ ಸಂಭ್ರಮಆರೆಸ್ಸೆಸ್ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ: ರಾಹುಲ್ ಗಾಂಧಿಸ್ವಯಂಸೇವಕ ಜುನೈದ ಮನೆ ಮೇಲೆ ಯುಪಿ ಪೊಲೀಸ್ ದಾಳಿಗೆ ಸಿಜೆಪಿ ಖಂಡನೆವಿದ್ಯಾರ್ಥಿಗಳ ಭಾವನೆಗೆ ಗೌರವ ನೀಡಿ ಪ್ರಧಾನ ಸ್ಥಾನತ್ಯಾಗ: ವಿಜಯೇಂದ್ರಧರ್ಮೇಂದ್ರ ಪ್ರಧಾನ ರಾಜೀನಾಮೆ ವಿದ್ಯಾರ್ಥಿ–ಯುವಜನರ ಗೆಲುವು: ಸಿದ್ದರಾಮಯ್ಯಕೇಂದ್ರ–ಸಿಜೆಪಿ ಸಂಧಾನ : ವಿದ್ಯಾರ್ಥಿಗಳ ಹೋರಾಟ ಅಂತ್ಯಇದು ಪ್ರಜಾಪ್ರಭುತ್ವದ ಗೆಲುವು: ಸೋನಮ್ ವಾಂಗ್ಚುಕಮೋದಿ ಸರ್ಕಾರದಲ್ಲಿ ಅಪರೂಪದ ಬೆಳವಣಿಗೆ; ರಾಜೀನಾಮೆ ನೀಡಿದ ಎರಡನೇ ಸಚಿವ ಧರ್ಮೇಂದ್ರ ಪ್ರಧಾನ