LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೆರೆಮನೆ ಮಹಿಳೆಯ ಸ್ನಾನದ ವಿಡಿಯೋ‌ ಚಿತ್ರೀಕರಣ; ಸಂಘ ಪರಿವಾರದ ಕಾರ್ಯಕರ್ತನ ಬಂಧನ

ಮಂಗಳೂರು, 5- ನೆರೆ‌ ಮನೆಯ ಮಹಿಳೆಯೊಬ್ಬರು ಸ್ನಾನದ ಕೋಣೆಯಲ್ಲಿ ಸ್ನಾನ ಮಾಡುವಾಗ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘ ಪರಿವಾರದ ಕಾರ್ಯಕರ್ತನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ..



ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ ಪೂಜಾರಿ (22) ಎನ್ನಲಾಗಿದ್ದು ಈತ ಹಿಂದೂ ಜಾಗರಣ ವೇದಿಕೆ ಪಕ್ಷಿಕೆರೆ ಘಟಕದ ಸಕ್ರೀಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ಘಟನೆ ಬೆಳಕಿಗೆ ಬಂದಿದೆ.



ಆರೋಪಿ ಸುಮಂತ್ ತನ್ನ ನೆರೆಮನೆಯಲ್ಲಿ ಮಹಿಳೆ ಸ್ನಾನ‌ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ. ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಹೊರೆಯ ಜನರು ಸುಮಂತನನ್ನು ಹಿಡಿದು ಧಳಿಸಿ, ಬಳಿಕ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್‌ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.



ತನಿಖೆಯ ವೇಳೆ ಬಂಧಿತ ಆರೋಪಿಯ ಮೊಬೈಲ್ ನಲ್ಲಿ ಹಲವಾರು ಅಶ್ಲೀಲ ವೀಡಿಯೊಗಳು ಮತ್ತು ಫೋಟೋಗಳು ಪತ್ತೆಯಾಗಿದ್ದು ಆದರೆ ಕೆಲವರ ಒತ್ತಡಕ್ಕೆ ಮಣಿದ ಪೊಲೀಸರು ಯುವಕನ ವಿರುದ್ಧ ಠಾಣೆಯಲ್ಲೇ ಜಾಮೀನು ನೀಡಬಹುದಾದ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು ಎನ್ನಲಾಗಿದೆ.



ನಂತರ ಮುಲ್ಕಿ ಪೊಲೀಸರು ಗುರುವಾರ 50 ಸಾವಿರ ರೂ.‌ ಮೌಲ್ಯದ ಜಾಮೀನಿನ ಮೇಲೆ ಮುಚ್ಚಳಿಕೆ ಬರೆಸಿಕೊಂಡು ಆರೋಪಿಯನ್ನು ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ