ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಕಾಕ-ಪಾಶ್ಚಾಪುರ ರಸ್ತೆಯಲ್ಲಿ ಉರುಳಿದ ಶಾಲಾ ಬಸ್: ವಿದ್ಯಾರ್ಥಿಗಳಿಗೆ ಗಾಯ

ಗೋಕಾಕ, ಜುಲೈ ೨೪: ಗೋಕಾಕ ತಾಲೂಕಿನ ಮೇಲಮಟ್ಟಿ ಬಳಿ ಗೋಕಾಕ- ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿ ಬಿದ್ದ ಪರಿಣಾಮ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಐದು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಇತರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರಡಿಮಠ ಗ್ರಾಮದ ಜೈ ಹನುಮಾನ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಭಾಗದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಸ್ಟೇರಿಂಗ್ ಲಾಕ್ ಆದ ಕಾರಣ ಬಸ್ ಉರುಳಿ ಬಿದ್ದಿದೆ ಎನ್ನಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.