LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಶೆಟ್ಟರ್

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.



ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.



ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್ ಪಕ್ಷದ‌‌ ಸಿದ್ದಾಂತ ಶೆಟ್ಟರಗೆ ಗೊತ್ತಿದೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ, ತಮ್ಮ ಸ್ವಾಭಿಮಾನ ಕಾಪಾಡಲು ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಅವರು ಗೆಲ್ಲುವ ಜೊತೆಗೆ, ಶೆಟ್ಟರ್ ಪಕ್ಷಕ್ಕೆ ಬರುವುದರಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಶಕ್ತಿ ಸಿಗಲಿದೆ ಎಂದು ಹೇಳಿದರು.



ರಾಹುಲ್ ಗಾಂಧಿಯವರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 150ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವಂತೆ ಸೂಚಿಸಿದ್ದಾರೆ. ಈಗ ಶೆಟ್ಟರ್ ಸೇರ್ಪಡೆಯಿಂದ ರಾಹುಲ್ ಗಾಂಧಿಯವರ ಆಕಾಂಕ್ಷೆ ಈಡೇರಲಿದೆ ಎಂಬುದು ನಮಗೆ ಖಾತ್ರಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಜಗದೀಶ್ ಶೆಟ್ಟರ್ ಅವರೊಂದಿಗೆ ಹಲವಾರು ದಶಕಗಳ ಕಾಲ ನಾವು ರಾಜ್ಯ ರಾಜಕೀಯದಲ್ಲಿದ್ದೆವು. ನಾವು ಬೇರೆ ಬೇರೆ ಪಕ್ಷದಲ್ಲಿದ್ದರೂ ವೈಯಕ್ತಿಕವಾಗಿ ನಾವು ಯಾವತ್ತೂ ಜಗಳವಾಡಿಲ್ಲ. ಅವರ ಪಕ್ಷ ಸೇರ್ಪಡೆಯಿಂದ ನಮ್ಮ ಪಕ್ಷಕ್ಕೆ ಮತ್ತಷ್ಟು ಬಲಬಂದಿದೆ’ ಎಂದರು.



ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್‌ ನೀಡದ್ದಕ್ಕೆ ಮುನಿಸಿಕೊಂಡಿದ್ದ ಶೆಟ್ಟರ್‌ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಹಠ ಬಿಡಲಿಲ್ಲ. ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಬೆಂಗಳೂರಿಗೆ ಆಗಮಿಸಿದ್ದ ಶೆಟ್ಟರ್‌ ಅವರು ಕಾಂಗ್ರೆಸ್‌ ನಾಯಕರನ್ನು ತಡರಾತ್ರಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದರು.



ಬಿಜೆಪಿ ತಮ್ಮನ್ನು ಬೆಳೆಸಿದೆ ಅದಕ್ಕೆ ಪ್ರತಿಯಾಗಿ ತಾವೂ ಪಕ್ಷದ ಬೆಳವಣಿಗೆಗೆ ಶ್ರಮವಹಿಸಿರುವದಾಗಿ ತಿಳಿಸಿದ ಶೆಟ್ಟರ್ ಪಕ್ಷದ ಕೆಲವರಿಗೆ ತಾವು ಬೇಡವಾಗಿದ್ದರಿಂದ ರಾಜ್ಯದ ಸಕ್ರಿಯ ರಾಜಕೀಯದಿಂದ ದೂರವಿಡಲು ಪ್ರಯತ್ನಿಸಿ ಟಿಕೆಟ್ ದೂರೆಯದಂತೆ ನೋಡಿಕೊಂಡರು. ತಮಗೆ ಶಾಸಕ ಸ್ಥಾನ ಹೊರತು ಯಾವುದೇ ಹುದ್ದೆ ಬೇಕಿರಲಿಲ್ಲ. ಆದರೆ ಅದಕ್ಕೂ ಒಪ್ಪದರಿಂದ ಬಿಜೆಪಿ ತೊರೆದಿರುವದಾಗಿ ತಿಳಿಸಿದರು.



ಕಾಂಗ್ರೆಸ್ ಮತ್ತು ತಮ್ಮ ಮಧ್ಯೆ ಯಾವುದೇ ಶರತ್ತಿಲ್ಲವೆಂದು ಶೆಟ್ಟರ್ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ