LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದೆಹಲಿಯಲ್ಲಿ ಬೆಚ್ಚಿಬೀಳಿಸುವ ಘಟನೆ! : 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಾಲಾ ಸಿಬ್ಬಂದಿಗೆ ಜಾಮೀನು

ಹೊಸದಿಲ್ಲಿ, ಮೇ 8 : ದೇಶವೇ ತಲೆ ತಗ್ಗಿಸುವಂತಹ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದ್ದು, ಪಶ್ಚಿಮ ದೆಹಲಿಯ ಜನಕ್‌ಪುರಿಯ ಖಾಸಗಿ ಶಾಲೆಯೊಂದರಲ್ಲಿ 3 ವರ್ಷದ ಬಾಲಕಿಯ ಮೇಲೆ ಶಾಲಾ ಸಿಬ್ಬಂದಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಘಟನೆ ಸಂಬಂಧ ಬಾಲಕಿಯ ತಾಯಿ ಮೇ 1ರಂದು ಜನಕ್‌ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಮಗಳ ಮೇಲೆ ಶಾಲೆಯ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 64(1) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಪೊಕ್ಸೊ ಕಾಯ್ದೆಯ ಸೆಕ್ಷನ್‌ 6 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ಆರೋಪಿಯನ್ನು ಗುರುತಿಸಿದ್ದರಿಂದ ಸಿಬ್ಬಂದಿಯನ್ನು ಶೀಘ್ರದಲ್ಲೇ ಬಂಧಿಸಲಾಯಿತು. ಬಳಿಕ ಆರೋಪಿಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆದರೆ ದ್ವಾರಕಾ ನ್ಯಾಯಾಲಯ ಮೇ 7ರಂದು ಆರೋಪಿಗೆ ಜಾಮೀನು ಮಂಜೂರು ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್‌ ಪರ ವಕೀಲರು ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ನ್ಯಾಯಾಲಯ ಜಾಮೀನು ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ಪ್ರತಿಯನ್ನು ಸ್ವೀಕರಿಸಿ ಪರಿಶೀಲಿಸಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಹೊರಬಿದ್ದ ಬೆನ್ನಲ್ಲೇ ಬಾಲಕಿಯ ಸುರಕ್ಷತೆ, ಶಾಲೆಗಳ ಭದ್ರತಾ ವ್ಯವಸ್ಥೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವ ಕ್ರಮಗಳ ಕುರಿತು ಮತ್ತೆ ಗಂಭೀರ ಚರ್ಚೆ ಆರಂಭವಾಗಿದೆ.

 

 

 

 

 

 

 

 

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST