LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಿದ್ದರಾಮಯ್ಯ ಆಪ್ತನನ್ನು ಭೇಟಿಯಾದ ಬಿಜೆಪಿ ಸಂಸದ

ಬೆಂಗಳೂರು, ೧೬- ತುಮಕೂರು ಸಂಸದ ಜಿ.ಎಸ್. ಬಸವರಾಜು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ, ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.



ಮೂಲತಃ ಕಾಂಗ್ರೆಸ್ ನಲ್ಲಿದ್ದ ಬಸವರಾಜು ಅವರು ಯಡಿಯೂರಪ್ಪನವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಯಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಬಿಜೆಪಿಯ ಜಿ.ಎಸ್. ಬಸವರಾಜು ವಿರುದ್ಧ ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ಕೆ.ಎನ್. ರಾಜಣ್ಣ, ಬಸವರಾಜು ಅವರನ್ನು ಬೆಂಬಲಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.



ಇದೀಗ ಈ ಇಬ್ಬರು ನಾಯಕರು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗುವುದು ಕಷ್ಟವೆಂಬುದನ್ನು ಅರಿತಿರುವ ಬಸವರಾಜು, ತಮ್ಮ ಪುತ್ರ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ ಅವರ ರಾಜಕೀಯ ಹಿತಾಸಕ್ತಿಯನ್ನು ಪರಿಗಣಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.



ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ತಾವು ಬಿಜೆಪಿ ತೊರೆಯಲು ಸಿದ್ದ ಎಂಬ ಸಂದೇಶವನ್ನು ಬಸವರಾಜು ರವಾನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಸವರಾಜು ಹಾಗೂ ಕೆ.ಎನ್. ರಾಜಣ್ಣ ನಡೆಸಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ