ಮೈಸೂರು, ನ. 19: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈಗ 80 ವರ್ಷ ವಯಸ್ಸಾಗಿದೆ. ಯಾರೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದರೂ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಐದನೇ ಸಾಲಿನಲ್ಲಿ ಕುಳಿತಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಕಾರ್ಯಕ್ರಮಕ್ಕೆ ನಾನೇ ತಡವಾಗಿ ಹೋಗಿದ್ದರಿಂದ ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯಿತು. ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದರು.