LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಿದ್ದರಾಮಯ್ಯರ ರಾಜಕೀಯ ಪಯಣ ಮುಂದಿನ ಪೀಳಿಗೆಗೆ ಸ್ಫೂರ್ತಿ: ಪ್ರಿಯಾಂಕ ಖರ್ಗೆ

ಬೆಂಗಳೂರು, ಮೇ 30 : ಸಿದ್ದರಾಮಯ್ಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮೂಲಕ ಕೋಮುವಾದಿ ಶಕ್ತಿಗಳಿಂದ ರಾಜ್ಯವನ್ನು ರಕ್ಷಿಸುವ ಅಗತ್ಯವಿದೆ. ಸಿದ್ದರಾಮನ ಹುಂಡಿಯಿಂದ ವಿಧಾನಸೌಧದವರೆಗೆ ಅವರ ರಾಜಕೀಯ ಜೀವನ ಮುಂದಿನ ಪೀಳಿಗೆಗೂ ಸ್ಫೂರ್ತಿಯ ಚಿಲುಮೆಯಾಗಿರಲಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ ದಾಖಲೆ ಹೊಂದಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು, ಸೈದ್ಧಾಂತಿಕ ನಿಲುವುಗಳು ಹಾಗೂ ರಾಜಕೀಯ ಹೋರಾಟಗಳ ಮೂಲಕ ರಾಜ್ಯದ ಜನರ ಅಪಾರ ಪ್ರೀತಿ ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಸಂವಿಧಾನದ ಮೌಲ್ಯಗಳು ಮತ್ತು ಜಾತ್ಯತೀತ ತತ್ವಗಳಿಗೆ ಬದ್ಧರಾಗಿದ್ದ ಸಿದ್ದರಾಮಯ್ಯ ಅವರು ಪ್ರಬುದ್ಧ ರಾಜಕಾರಣಕ್ಕೆ ಹೊಸ ದಿಕ್ಕು ತೋರಿಸಿದ್ದಾರೆ. ನಮ್ಮ ತಲೆಮಾರಿನ ರಾಜಕಾರಣಿಗಳು ಹಾಗೂ ಯುವ ನಾಯಕರಿಗೆ ಅವರು ಸ್ಫೂರ್ತಿಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ತಮ್ಮ ವೈಯಕ್ತಿಕ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮದಂತಹ ಪ್ರಮುಖ ಖಾತೆಗಳ ಜವಾಬ್ದಾರಿ ನಿರ್ವಹಿಸುವ ವೇಳೆ ಸಂಪುಟದಲ್ಲಿನ ಕಿರಿಯ ಸಚಿವ ಎಂಬ ಹಿಂಜರಿಕೆ ಉಂಟಾಗದಂತೆ ಆತ್ಮವಿಶ್ವಾಸ ತುಂಬಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಜನಪರ ಯೋಜನೆಗಳನ್ನು ರೂಪಿಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ಪ್ರಸಕ್ತ ಅವಧಿಯಲ್ಲಿಯೂ ಎರಡು ಪ್ರಮುಖ ಖಾತೆಗಳ ಜವಾಬ್ದಾರಿ ನಿರ್ವಹಿಸುವ ಸಂದರ್ಭದಲ್ಲಿ ಅವರ ಮಾರ್ಗದರ್ಶನ ಅತ್ಯಂತ ಮೌಲ್ಯಯುತವಾಗಿತ್ತು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯರ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ತುಂಬಿವೆ. ಇಂತಹ ಅನುಭವಿ ನಾಯಕರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿರುವುದು ಹೆಮ್ಮೆಯ ಸಂಗತಿ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿರುವುದು ಭಾವನಾತ್ಮಕ ಸಂಗತಿಯಾಗಿದೆ. ತಮ್ಮ ಮೌಲ್ಯಗಳಿಗೆ ಬದ್ಧರಾಗಿ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಹತ್ತಿರವಾಗಿದ್ದ ಅವರ ಕೊಡುಗೆಗಳನ್ನು ಸದಾ ನೆನಪಿಸಿಕೊಳ್ಳುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಬಾರಿಯ ಮುಂಗಾರು ದುರ್ಬಲ, ವಾಡಿಕೆಗಿಂತ ಕಡಿಮೆ ಮಳೆ ಸಾಧ್ಯತೆ3 ತಿಂಗಳಲ್ಲಿ ತೀರ್ಪು ಪ್ರಕಟಿಸಿ: ಎಲ್ಲ ಹೈಕೋರ್ಟಗಳಿಗೆ ಸುಪ್ರೀಮ ಕೋರ್ಟ ನಿರ್ದೇಶನನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆಘಾತಕಾರಿ: ಸುಪ್ರೀಮ ಕೋರ್ಟ ಅಸಮಾಧಾನವಿಜಯಪುರ ಜಮೀನು ವಿವಾದ: ಗುಂಡಿನ ದಾಳಿ ನಡೆಸಿ, ಕೊಚ್ಚಿ 6 ಮಂದಿಯ ಭೀಕರ ಹತ್ಯೆಸಿದ್ದರಾಮಯ್ಯರ ರಾಜಕೀಯ ಪಯಣ ಮುಂದಿನ ಪೀಳಿಗೆಗೆ ಸ್ಫೂರ್ತಿ: ಪ್ರಿಯಾಂಕ ಖರ್ಗೆಕೋಮು ಗಲಭೆ ತಡೆಯಲು ಸಿದ್ದರಾಮಯ್ಯ ನೀಡಿದ್ದ ಸೂಚನೆ ನೆನೆದ ಸೆಂಥಿಲ್ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ ಫೋಗಟ್‌ಗೆ ಸುಪ್ರೀಮ ಕೋರ್ಟ ಅನುಮತಿನ್ಯಾಯಾಂಗದಲ್ಲಿಯೂ ಭ್ರಷ್ಟಾಚಾರ ಇದೆ ಮತ್ತು ನ್ಯಾಯಾಧೀಶರನ್ನು ಪವಿತ್ರ ಗೋವುಗಳಂತೆ ಪರಿಗಣಿಸಬೇಕಿಲ್ಲ : ಮದ್ರಾಸ ಹೈಕೋರ್ಟಎಸಿ ಸ್ಫೋಟ : ಸಿಸಿಐ ಮಾಜಿ ಅಧ್ಯಕ್ಷ ಧನೇಂದ್ರ ಕುಮಾರ ಸಾವುಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಗೋಕಾಕದಲ್ಲಿ ವಿಶೇಷ ಪೂಜೆ