LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ವಂದೇ ಭಾರತ ರೈಲಿನ ಸಮಯಕ್ಕೆ ಹೊಂದಾಣಿಕೆ ಆಗುವಂತೆ ಬೆಳಗಾವಿಯಿಂದ ವಿಶೇಷ ಬಸ್

ಹುಬ್ಬಳ್ಳಿ, 3- ಬೆಂಗಳೂರು - ಧಾರವಾಡ ನಡುವೆ ಹೊಸದಾಗಿ ಆರಂಭವಾಗಿರುವ "ವಂದೇ ಭಾರತ" ರೈಲಿನ ಸಮಯಕ್ಕೆ ಹೊಂದಾಣಿಕೆ ಆಗುವಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಹಾಗು ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ವೋಲ್ವೋ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣ ಮತ್ತು ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.



ಬೆಳಗಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಗೆ ಬೆಂಗಳೂರು-ಧಾರವಾಡ ನಡುವೆ ಆರಂಭಿಸಲಾಗಿರುವ "ವಂದೇ ಭಾರತ " ರೈಲಿನಲ್ಲಿ ಪ್ರಯಾಣ ಮಾಡಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಮಲ್ಟಿ ಆ್ಯಕ್ಸೆಲ್ ವೋಲ್ವೊ ಎಸಿ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣಕ್ಕೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ರೈಲಿನ ಆಗಮನ - ನಿರ್ಗಮನ ಸಮಯಕ್ಕೆ ಅನುಗುಣವಾಗಿ ಈ ಬಸ್ ಗಳ ವೇಳಾಪಟ್ಟಿ ನಿಗದಿಪಡಿಸಲಾಗಿದೆ.



ವೋಲ್ವೊ ಎಸಿ ಬಸ್:



ಹುಬ್ಬಳ್ಳಿ ರೈಲು ನಿಲ್ದಾಣದಿಂದ ಬೆಳಿಗ್ಗೆ 11-30ಕ್ಕೆ ಹೊರಡುತ್ತದೆ ಮತ್ತು ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಮಧ್ಯಾಹ್ನ 1-30ಕ್ಕೆ ತಲುಪುತ್ತದೆ. ಇನ್ನೊಂದು ಬಸ್ಸು ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಬೆಳಿಗ್ಗೆ 11-00 ಕ್ಕೆ ಹೊರಡುತ್ತದೆ. ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಮಧ್ಯಾಹ್ನ 1-10ಕ್ಕೆ ಆಗಮಿಸಲಿದೆ.

ಪ್ರಯಾಣ ದರ ರೂ.180 ನಿಗದಿಪಡಿಸಲಾಗಿದೆ.



ರಾಜಹಂಸ ಬಸ್:



ಧಾರವಾಡ ರೈಲು ನಿಲ್ದಾಣದಿಂದ ಮಧ್ಯಾಹ್ನ 12-25ಕ್ಕೆ ಹೊರಡುತ್ತದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ 1-55ಕ್ಕೆ ತಲುಪುತ್ತದೆ. ಇನ್ನೊಂದು ಬಸ್ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಬೆಳಿಗ್ಗೆ 11-20ಕ್ಕೆ ಹೊರಡುತ್ತದೆ. ಧಾರವಾಡ ರೈಲು ನಿಲ್ದಾಣಕ್ಕೆ ಮಧ್ಯಾಹ್ನ 12-50ಕ್ಕೆ ಆಗಮಿಸಲಿದೆ.

ಪ್ರಯಾಣ ದರ ರೂ.135 ನಿಗದಿಪಡಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ