LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮೇ ೧೦ ರಂದು ರಾಜ್ಯ ವಿಧಾನಸಭೆ ಚುನಾವಣೆ

ಹೊಸದಿಲ್ಲಿ, ಮಾರ್ಚ ೨೯- ಕರ್ನಾಟಕ ವಿಧಾನಸಭೆಯ ಚುನಾವಣೆ ಮೇ ೧೦  ರಂದು  ಒಂದು ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ ಘೋಷಿಸಿದ್ದಾರೆ.



ದೆಹಲಿಯಲ್ಲಿ ಬುಧವಾರ ಬೆಳಿಗ್ಗೆ  ಪತ್ರಿಕಾಗೋಷ್ಠಿ ನಡೆಸಿದ ಅವರು ೨೨೪ ಸ್ಥಾನಗಳಿಗೆ ಚುನಾವಣೆಗಳು ನಡೆಯಲಿದ್ದು ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.



ಮೇ ೧೩ ರಂದು ಫಲಿತಾಂಶ ಪ್ರಕಟಗೊಳ್ಳಲಿದ್ದು ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ.



ಎಪ್ರಿಲ್‌ ೧೩ ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ.  ನಾಮಪತ್ರ ಸಲ್ಲಿಕೆಗೆ ಎಪ್ರಿಲ್‌ ೨೦ ಕೊನೆ ದಿನವಾಗಿದ್ದು ಎಪ್ರಿಲ್‌ ೨೧ ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಎಪ್ರಿಲ್‌ ೨೪ ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.

ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ. 80 ವರ್ಷಮೇಲ್ಪಟ್ಟ 12,15,763 ಮತದಾರರಿದ್ದು  5,55,073 ಮತದಾರರು ಅಂಗವಿಕಲರಿದ್ದಾರೆ ಮತ್ತು 4,699 ತೃತೀಯ ಲಿಂಗಿ ಮತದಾರರು ಇದ್ದಾರೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಬಾರಿ 9,17,241 ಯುವಕರು ಮೊದಲ ಬಾರಿ ಮತ ಚಲಾಯಿಸಲಿದ್ದಾರೆ. 



ರಾಜ್ಯದ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ



ವಿಶೇಷವಾಗಿ ಯುವ ಸಿಬ್ಬಂದಿ ಮಾತ್ರ ನಿರ್ವಹಿಸುವ 224 ಪ್ರತ್ಯೇಕ ಮತಗಟ್ಟೆ, ಮಹಿಳೆ ನಿರ್ವಹಿಸುವ 1320 ಮತಗಟ್ಟೆಗಳು ಇರುತ್ತವೆಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ