ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಹುಕೋಟಿ ಬಿಟ್ ಕಾಯಿನ್ ಹಗರಣ; ಮರು ತನಿಖೆಗೆ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಸೋಮವಾರ ಆದೇಶಿಸಿದೆ.

ಸಿಐಡಿ ಸಹ ಸರ್ಕಾರದ ಆದೇಶದಂತೆ ಕರ್ಭೀಕರ ನೇತೃತ್ವದಲ್ಲಿ ಎಸ್​ಐಟಿ ರಚನೆ  ಮಾಡಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಟ್ ಕಾಯಿನ್ ಪ್ರಕರಣದ ಮರು ತನಿಖೆಗೆ ಅದೇಶಿಸಿದ್ದೇವೆ ಎಂದರು. ಸಿಐಡಿ ಅಡಿಯಲ್ಲಿ ಎಸ್‌ ಐಟಿ ರಚನೆ ಮಾಡಿದ್ದೇವೆ. ಇದು ಟೆಕ್ನಿಕಲ್ , ಅಂತರ್ ರಾಜ್ಯ ಮತ್ತು ಅಂತರ್ರಾಷ್ಟ್ರೀಯ ಹಗರಣ ಇರುವುದಿರಂದ ನಿಗದಿತ ಸಮಯದಲ್ಲಿ ಮುಗಿಯಲಿದೆ ಎಂದು ಹೇಳಲು ಬರುವುದಿಲ್ಲ ಎಂದು ಹೇಳಿದರು.

2020ರಲ್ಲಿ ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ ಕಾಟನ್​ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಅನುಮಾನ ಇದೆ. ಹೀಗಾಗಿ ವಿಶೇಷ ತಂಡ ರಚಿಸಿ ಹೆಚ್ಚಿನ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ​ ಕಮಿಷನರ್ ದಯಾನಂದ ಅವರು ಸಿಐಡಿ  ಡಿಜಿಪಿ ಎಂ.ಎ.ಸಲೀಮ ಅವರಿಗೆ ಪತ್ರ ಬರೆದಿದ್ದರು.

ಈ ಹಿಂದೆ ಸಿಸಿಬಿ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ಬಂಧಿಸಿದ್ದರು. ಆರೋಪಿ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್‌ ಜಾಲತಾಣ ಹ್ಯಾಕ್ ಮಾಡಿ 46 ಕೋಟಿ ದೋಚಿದ್ದ ಸಂಗತಿ ಪತ್ತೆ ಮಾಡಿದ್ದರು. ಜೊತೆಗೆ, ಶ್ರೀಕಿ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಸಿದ್ದ ಬಿಟ್ ಕಾಯಿನ್ ಪ್ರಕರಣಗಳು ಹೊರಬಂದಿದ್ದವು. ಆದರೆ, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಸಿಸಿಬಿ ಪೊಲೀಸರು ತರಾತುರಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡೆ ಹಲವು ಅನುಮಾನಕ್ಕೆ ಕಾರಣವಾಗಿತ್ತು.

ಕಾಟನ್ ಪೇಟೆ ಪ್ರಕರಣವನ್ನು ಈ ಹಿಂದೆ ಸಿಸಿಬಿ ತನಿಖೆ ಮಾಡಿತ್ತು. ಸಿಸಿಬಿ ತನಿಖೆಯಲ್ಲಿ ಹಗರಣ ನಡೆದಿದೆ, ರಾಜಕಾರಣಿಗಳು ಹಣ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದವು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆರೋಪ ಕೇಳಿಬಂದಿತ್ತು ಹೀಗಾಗಿ ಮರು ತನಿಖೆಗೆ ಕಾಂಗ್ರೆಸ್ ಆಗ್ರಹ ಮಾಡಿತ್ತು. ಅದರಂತೆ ಸರ್ಕಾರ ಈಗ ಸಿಐಡಿಗೆ ಪ್ರಕರಣವನ್ನು ವರ್ಗಾವಣೆ ಮಾಡಿದೆ.

ಈ ಪ್ರಕರಣದಲ್ಲಿ ಹಲವು ಬಿಜೆಪಿ ನಾಯಕರ ಕೈವಾಡವಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿತ್ತು. ಆರೋಪಿಗಳು ರಾಜ್ಯ ಸರ್ಕಾರದ ಇ-ಪೋರ್ಟಲ್ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡುವ ಮೂಲಕ 11.5 ಕೋಟಿ ರೂ. ಆರೋಪಿಗಳಲ್ಲಿ ಒಬ್ಬನಾದ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯನ್ನು ಬಂಧನವಾಗಿತ್ತು. ಬಳಿಕ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.