LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಹಕಾರ ಕ್ಷೇತ್ರದ ಬಲವರ್ಧನೆಗೆ ಅವಲೋಕನ ಅಗತ್ಯ

ಅಳ್ನಾವರ, ನ. 18: ಸಹಕಾರ ಕ್ಷೇತ್ರದ ಸಾಧನೆಗಳು ಹಾಗೂ ಉದ್ದೇಶಗಳನ್ನು ಹಳ್ಳಿಹಳ್ಳಿಯ ರೈತರು ಮತ್ತು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಮಂಜುನಾಥ ಮುರಳ್ಳಿ ಹೇಳಿದರು.

ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ 73ನೇ ಸಹಕಾರ ಸಪ್ತಾಹದ 5ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ತರಬೇತಿ ಹಾಗೂ ವೃತ್ತಿಪರ ಸೇವೆಗಳಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ. ಸಹಕಾರ ಕ್ಷೇತ್ರದ ಸಾಧನೆ, ಕಾರ್ಯನಿರ್ವಹಣೆ, ಸಮಸ್ಯೆಗಳು, ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಚೆನ್ನಬಸವರಾಜ ಉಪನ್ಯಾಸ ನೀಡಿ, ಸಾರ್ವಜನಿಕ ಮತ್ತು ಖಾಸಗಿ ವಲಯಗಳೊಂದಿಗೆ ಸಹಕಾರ ಕ್ಷೇತ್ರವೂ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ದೇಶದ ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬಹುದು. ಸಹಕಾರ ಸಂಸ್ಥೆಗಳ ಪಾಲುದಾರಿಕೆ ಹಾಗೂ ಕಾರ್ಯಕ್ಷಮತೆ ಹೆಚ್ಚಿಸುವ ಮೂಲಕ ಗ್ರಾಮೀಣ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಬಹುದು ಎಂದು ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಧಾರವಾಡ ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ, ಅಳ್ನಾವರ ತಾಲೂಕಿನ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಬಸವೇಶ ಹಟ್ಟಿಹೊಳಿ ಅಧ್ಯಕ್ಷತೆ ವಹಿಸಿದ್ದರು. ಕೆಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಪ್ಪ ಸಪ್ಪೋರಿ ಸಹಕಾರ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿ ಮಿರ್ಜಾ ಸನದಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು.

ಸಚಿವ ಸಂತೋಷ ಲಾಡ್ ಅವರ ಆಪ್ತ ಕಾರ್ಯದರ್ಶಿ ಶ್ರೀಕಾಂತ ಗಾಯಕವಾಡ, ನದೀಮ ಕಾಂಟ್ರಾಕ್ಟರ, ಉಮೇಶ ಭೂಮಣ್ಣನವರ, ನಿಂಗಪ್ಪ ಬೇಕ್ವಾಡಕರ, ಬಳಿರಾಮ ಅಳವನಿ,  ಸೋನಿಯಾ ಬೆರೆಟೊ, ಸೈಮನ್ ಬೆರೆಟೊ, ನಾರಾಯಣ ಪಟೇಲ್, ಎಂ.ಕೆ. ಭಾಗವನ್, ಸಿದ್ದಪ್ಪ ಕಿರ್ಲೋಸ್ಕರ್, ಸುನೀತಾ ಸಿದ್ರಾಮ್, ನಿಂಗರಾಜ ಬೆಣ್ಣಿ, ಕೆಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಸ್.ವಿ. ಹೂಗಾರ, ಸಲೀಂ, ಬಸವಣ್ಣಿ, ರಾಘವೇಂದ್ರ, ಕೆ.ಎಂ. ಅರ್ಜುನ ಅಷ್ಟೇಕರ, ಸೋಮಶೇಖರ ಇನಾಮದಾರ, ನಾರಾಯಣ ಮೋರೆ, ಪರಮೇಶ್ವರ ತೇಗೂರ, ಎಚ್.ಎಸ್. ಲಲಿತಾ, ಕವಿತಾ ಹಾಸಬಿಮಠ, ಬಿ.ಎಫ್. ಹೊಸಮನಿ ಸೇರಿದಂತೆ ಸಹಕಾರ ಕ್ಷೇತ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST