ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಸ್ಲಿಮ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಮ ಕೋರ್ಟ ತಡೆಯಾಜ್ಞೆ

ಹೊಸದಿಲ್ಲಿ, ೨೫- ರಾಜ್ಯದಲ್ಲಿ ಅತೀ ಹಿಂದುಳಿದ ಮುಸ್ಲಿಮ ಸಮಾಜಕ್ಕೆ ನೀಡಲಾಗುತ್ತಿದ್ದ 2ಬಿ ಮೀಸಲಾತಿಯನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದು ಮಾಡಿದ ಆದೇಶಕ್ಕೆ ಮಂಗಳವಾರ ಸುಪ್ರೀಮ ಕೋರ್ಟ ತಡೆಯಾಜ್ಞೆ ನೀಡಿದ್ದು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

ಕರ್ನಾಟಕದಲ್ಲಿ ಸುಮಾರು ನಾಲ್ಕು ದಶಕಗಳಿಂದ 2ಬಿ ಕೆಟಗರಿ ಅಡಿಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರವು ಚುನಾವಣೆ ಘೋಷಣೆಗೂ ಒಂದು ದಿನ ಮೊದಲು ತರಾತುರಿಯಲ್ಲಿ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸಿ ಆ 4% ಅನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಕರ್ನಾಟಕದಲ್ಲಿ ಚುನಾವಣೆಯ ವೇಳೆಯಲ್ಲಿ ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ. 4ರ ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇನ್ನೊಬ್ಬರ ಮೀಸಲಾತಿ ಕಿತ್ತು ನಮಗೆ ಕೊಡುವುದು ಬೇಡ ಎಂದು ಹಲವರು ಪ್ರಜ್ಞಾವಂತರು ವಿರೋಧಿಸಿದ್ದರು. ಇದೀಗ ಸುಪ್ರೀಮ ಕೋರ್ಟ ಕೂಡ ಅದೇ ನಿಲುವನ್ನು ವ್ಯಕ್ತಪಡಿಸಿ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದೆ.

ಚುನಾವಣೆಗಳ ಸಮಯದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಬಿಜೆಪಿಗೆ ಮೀಸಲಾತಿ ನೀಡುವ ಉದ್ದೇಶದಿಂದ ತರಾತುರಿಯಲ್ಲಿ ಮುಸ್ಲಿಮರ ಮೀಸಲಾತಿ ರದ್ದು ಮಾಡಿದೆ. ಈ ತೀರ್ಮಾನವು ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಮ ಕೋರ್ಟ ಈ ಹಿಂದೆ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿತ್ತು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.