LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ರೈತರ ಮಾರಣಹೋಮ ಪ್ರಕರಣ ವಿಚಾರಣೆ ವಿಳಂಬಕ್ಕೆ ಸುಪ್ರೀಮ ಅಸಮಾಧಾನ

ಹೊಸದಿಲ್ಲಿ, ಮೇ 8 : 2021ರ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷಿಗಳನ್ನು ವಿಚಾರಣೆಗೆ ಹಾಜರುಪಡಿಸುವಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ಸುಪ್ರೀಮ ಕೋರ್ಟ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಾಕ್ಷಿಗಳ ಹಾಜರಾತಿ ಖಾತರಿಗೊಳಿಸಲು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಕ್ಷಿ ರಕ್ಷಣೆ ಯೋಜನೆಯಡಿ ಅವರಿಗೆ ಭದ್ರತೆ ಒದಗಿಸಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಗಾವಲು ಪಡೆಯ ವಾಹನ ಹರಿದು ಐವರು ರೈತರು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠ ನಡೆಸಿತು.

ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಂತೆ ಆಶಿಶ್ ಮಿಶ್ರಾ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾನೆ.

ಪ್ರಕರಣದ ಮೊದಲ ವಿಚಾರಣೆಯಲ್ಲಿ 44 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, 15 ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ. ಇನ್ನೂ 72 ಸಾಕ್ಷಿಗಳ ವಿಚಾರಣೆ ಬಾಕಿಯಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಎರಡನೇ ವಿಚಾರಣೆಯಲ್ಲಿ 35 ಸಾಕ್ಷಿಗಳ ಪೈಕಿ 25 ಮಂದಿಯನ್ನು ಬಿಡುಗಡೆಗೊಳಿಸಲಾಗಿದ್ದು, ಇನ್ನೂ 9 ಮಂದಿ ವಿಚಾರಣೆಗೆ ಬಾಕಿ ಇದ್ದಾರೆ ಎಂದೂ ತಿಳಿಸಲಾಯಿತು.

ಆಶಿಶ್ ಮಿಶ್ರಾ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡಿಸಿ, ಸಾಕ್ಷಿಗಳ ವಿರುದ್ಧ ಜಾಮೀನುಸಹಿತ ಹಾಗೂ ಜಾಮೀನುರಹಿತ ವಾರೆಂಟ್‌ಗಳನ್ನು ಹೊರಡಿಸಿದ್ದರೂ ಕಳೆದ 2 ತಿಂಗಳಿಂದ ಯಾವುದೇ ಸಾಕ್ಷಿಯನ್ನು ವಿಚಾರಣೆಗೊಳಪಡಿಸಲಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಯ ವಿಳಂಬದ ಬಗ್ಗೆ ಪ್ರಾಸಿಕ್ಯೂಷನ್‌ ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿತು. ಮಾರ್ಚ್‌ನಿಂದ ಇಲ್ಲಿಯವರೆಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ನ್ಯಾಯಪೀಠ ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ವಿಚಾರಣೆಯ ವಿಳಂಬದ ಕುರಿತು ಸಂಬಂಧಿತ ಪ್ರಾಸಿಕ್ಯೂಷನ್‌ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

 

 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ