LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಸೂರ್ಯವಂಶಿ ಸಿಡಿಲಬ್ಬರಕ್ಕೆ ವಿಶ್ವದಾಖಲೆಗಳು ಪತನ

52 ಎಸೆತಗಳಲ್ಲಿ ದ್ವಿಶತಕ; ಒಂದೇ ಇನ್ನಿಂಗ್ಸ್‌ನಲ್ಲಿ 24 ಸಿಕ್ಸರ್‌

ದೋಹಾ, ನ. 24: ಭಾರತದ 15 ವರ್ಷದ ಯುವ ಕ್ರಿಕೆಟಿಗ ವೈಭವ ಸೂರ್ಯವಂಶಿ ಮತ್ತೊಮ್ಮೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ ಶತಕ ಹಾಗೂ 52 ಎಸೆತಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್‌ನ ಹಲವು ದಾಖಲೆಗಳನ್ನು ಮುರಿದಿದ್ದಾರೆ.

ಭಾರತ ‘ಎ’ ತಂಡವನ್ನು ಪ್ರತಿನಿಧಿಸುತ್ತಿರುವ ಸೂರ್ಯವಂಶಿ, ಯುಎಇ ಬೌಲರ್‌ಗಳ ವಿರುದ್ಧ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಅವರು ಅತ್ಯಂತ ಕಡಿಮೆ ಎಸೆತಗಳಲ್ಲಿ ಶತಕ, 150 ರನ್ ಹಾಗೂ ದ್ವಿಶತಕ ಪೂರೈಸುವ ಮೂಲಕ ದಾಖಲೆಗಳ ಸರಮಾಲೆಯನ್ನೇ ನಿರ್ಮಿಸಿದರು.

ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ ಸೂರ್ಯವಂಶಿ, ಆಸ್ಟ್ರೇಲಿಯಾದ ಜೇಕ್ ಫ್ರೇಸರ್ ಮೆಕ್‌ಗರ್ಕ್ ಹೆಸರಿನಲ್ಲಿದ್ದ ಅತ್ಯಂತ ವೇಗದ ಲಿಸ್ಟ್ ಎ ಶತಕದ ದಾಖಲೆಯನ್ನು ಮುರಿದರು.

2023ರಲ್ಲಿ ಟ್ಯಾಸ್ಮೆನಿಯಾ ವಿರುದ್ಧದ ಪಂದ್ಯದಲ್ಲಿ ಮೆಕ್‌ಗರ್ಕ್ 29 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ 15 ವರ್ಷದ ಭಾರತೀಯ ಬ್ಯಾಟರ್ ಒಂದು ಎಸೆತ ಕಡಿಮೆಯಲ್ಲೇ ಶತಕ ಪೂರೈಸುವ ಮೂಲಕ ಆ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಶತಕದ ಬಳಿಕವೂ ಬ್ಯಾಟಿಂಗ್ ಅಬ್ಬರ ಮುಂದುವರಿಸಿದ ಸೂರ್ಯವಂಶಿ ಕೇವಲ 40 ಎಸೆತಗಳಲ್ಲಿ 150 ರನ್ ಪೂರೈಸಿದರು. ಇದರೊಂದಿಗೆ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 150 ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಬಳಿಕ ಕೇವಲ 12 ಎಸೆತಗಳಲ್ಲಿ ಮತ್ತಷ್ಟು 50 ರನ್ ಗಳಿಸಿದ ಅವರು, 52 ಎಸೆತಗಳಲ್ಲಿ ದ್ವಿಶತಕ ಪೂರೈಸುವ ಮೂಲಕ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದರು.

ಸಿಕ್ಸರ್‌ಗಳಲ್ಲೂ ವಿಶ್ವದಾಖಲೆ

ಯುಎಇ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದ ಸೂರ್ಯವಂಶಿ, ಪಂದ್ಯದ 12ನೇ ಓವರ್‌ನಲ್ಲಿ ಸತತ 4 ಸಿಕ್ಸರ್‌ಗಳನ್ನು ಸಿಡಿಸಿದರು. ಇದೇ ವೇಳೆ ತಮ್ಮ ಇನ್ನಿಂಗ್ಸ್‌ನ 24ನೇ ಸಿಕ್ಸರ್ ದಾಖಲಿಸಿದರು.

ಇದರೊಂದಿಗೆ ಲಿಸ್ಟ್ ಎ ಕ್ರಿಕೆಟ್‌ನ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನೂ ತಮ್ಮದಾಗಿಸಿಕೊಂಡರು.

ಕೇವಲ 15ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ ಇಂತಹ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಸೂರ್ಯವಂಶಿ, ಭಾರತೀಯ ಕ್ರಿಕೆಟ್‌ನ ಭರವಸೆಯ ಯುವ ಪ್ರತಿಭೆಯಾಗಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST